“ಪ್ರಧಾನಿ ಉಜ್ಜಯಿನಿ, ಮಣಿಪುರದ ಬಗ್ಗೆ ಮಾತನಾಡುವುದಿಲ್ಲ”: ರಾಜಸ್ಥಾನದ ಕುರಿತ ಮೋದಿ ಟೀಕೆಗೆ ಕಾಂಗ್ರೆಸ್ ತಿರುಗೇಟು

Update: 2023-10-02 10:56 GMT

ಜೈರಾಮ್ ರಮೇಶ್ / ಪ್ರಧಾನಿ ನರೇಂದ್ರ ಮೋದಿ (PTI)

ಹೊಸದಿಲ್ಲಿ: ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ರಾಜಸ್ಥಾನ ಸರಕಾರವನ್ನು ಟೀಕಿಸಿರುವ ಪ್ರಧಾನಿ ನರೇಂದ್ರ ಮೋದಿಗೆ ತಿರುಗೇಟು ನೀಡಿರುವ ಕಾಂಗ್ರೆಸ್, ಮಹಿಳೆಯರ ಮೇಲಿನ ದೌರ್ಜನ್ಯವನ್ನು ಕಾಂಗ್ರೆಸ್‌ ಎಂದಿಗೂ ಕ್ಷಮಿಸುವುದಿಲ್ಲ, ಆದರೆ ಬಿಜೆಪಿ ಅಂತಹ ಪ್ರಕರಣಗಳಲ್ಲಿ ಜವಾಬ್ದಾರಿ ಅಥವಾ ಯಾವುದೇ ಹೊಣೆಗಾರಿಕೆಯನ್ನು ತೋರಿಸುವುದಿಲ್ಲ ಎಂದು ಹೇಳಿದೆ.

ಸೋಮವಾರ ಚಿತ್ತೋರ್‌ಗಢದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭ್ರಷ್ಟಾಚಾರ ಮತ್ತು ಮಹಿಳೆಯರ ಸುರಕ್ಷತೆಯ ವಿಷಯದ ಬಗ್ಗೆ ರಾಜಸ್ಥಾನದ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ದೇಶದಲ್ಲಿ ಎಲ್ಲಿಯಾದರೂ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯಗಳು ನಡೆದಾಗ ನನಗೆ ನೋವಾಗುತ್ತದೆ ಆದರೆ ಕಾಂಗ್ರೆಸ್ ಇದನ್ನು ರಾಜಸ್ಥಾನದಲ್ಲಿ ಸಂಪ್ರದಾಯವನ್ನಾಗಿ ಮಾಡಿದೆ ಎಂದು ಪ್ರಧಾನಿ ಹೇಳಿದ್ದರು.

ಆರೋಪಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, "ಪ್ರಧಾನಿ ಮಣಿಪುರದ ಬಗ್ಗೆ ಒಂದು ಮಾತನ್ನೂ ಹೇಳುವುದಿಲ್ಲ, ಅವರು ಉಜ್ಜಯಿನಿಯ‌ ಬಗ್ಗೆ ಉಲ್ಲೇಖಿಸುವುದಿಲ್ಲ, ನಮ್ಮ ರಾಷ್ಟ್ರೀಯ ಚಾಂಪಿಯನ್‌ಗಳಾದ ಮಹಿಳಾ ಕುಸ್ತಿಪಟುಗಳ ಮೇಲಿನ ದೌರ್ಜನ್ಯಕ್ಕಾಗಿ ತಮ್ಮದೇ ಪಕ್ಷದ ಸಂಸದರ ವಿರುದ್ಧ ಕ್ರಮಕೈಗೊಳ್ಳುವುದಿಲ್ಲ ಅಥವಾ ದೆಹಲಿ ಪೊಲೀಸರ ದೌರ್ಜನ್ಯವನ್ನು ಖಂಡಿಸುವುದಿಲ್ಲ, ಆದರೆ ಚುನಾವಣಾ ಪ್ರಚಾರಕ್ಕೆ ಬಂದಾಗ, ಅವರು ಉತ್ತಮವಾಗಿ ಲಜ್ಜೆಗೆಟ್ಟ ಸುಳ್ಳುಗಳನ್ನು ಆಡುತ್ತಾರೆ." ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News