ಅಬ್ದುಲ್ ಅಹದ್ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ
Update: 2023-09-05 03:45 GMT
ಬೆಂಗಳೂರು, ಸೆ.5: ಕರಾವಳಿ ಕಾವಲು ಪಡೆಯ ಎಸ್ಪಿಯಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಬ್ದುಲ್ ಅಹದ್ ಅವರನ್ನು ಬೆಂಗಳೂರಿನ ಕೇಂದ್ರ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಯವರಾದ ಅವರು ಈ ಹಿಂದೆ ಬೆಂಗಳೂರಿನ ವೈಟ್ ಫೀಲ್ಡ್ ಡಿಸಿಪಿಯಾಗಿ, ಭ್ರಷ್ಟಾಚಾರ ನಿಗ್ರಹ ದಳ ಎಸಿಬಿ ಯ ಬೆಂಗಳೂರು ಎಸ್ಪಿಯಾಗಿ, ಸಿ ಐ ಡಿ ಯಲ್ಲಿ ಆರ್ಥಿಕ ಅಪರಾಧಗಳ ವಿಭಾಗದ ಎಸ್ಪಿಯಾಗಿ ಹಾಗೂ ಕೆ ಎಸ್ ಆರ್ ಪಿ ಯಲ್ಲಿ ಕಮಾಂಡೆಂಟ್ ಆಗಿ ಸೇವೆ ಸಲ್ಲಿಸಿದ್ದಾರೆ.