‘ವಿವೇಕಾನಂದರ ಆದರ್ಶ ಪಾಲಿಸುವಂತೆ ಕೆಂಪರಾಜು ಕರೆ’

Update: 2016-01-12 18:21 GMT

ವಿವೇಕಾನಂದರ 153ನೆ ಜಯಂತ್ಯುತ್ಸವ ಕಾರ್ಯಕ್ರಮ
ಆಧುನಿಕ ಜೀವನ ಶೈಲಿಯ ಪ್ರಭಾವಕ್ಕೆ ಒಳಗಾಗಿರುವ ಯುವಕರು ಹಾದಿ ತಪ್ಪದಂತೆ ತಡೆಯಲು ಸ್ವಾಮಿ ವಿವೇಕಾನಂದರ ಆದರ್ಶ ಮತ್ತು ವೌಲ್ಯಗಳ ಪಾಲನೆ ಅಗತ್ಯ ಎಂದು ವಿವೇಕಾನಂದ ಫೌಂಡೇಷನ್ ಸಂಸ್ಥಾಪಕ ಕೆ.ಕೆಂಪರಾಜು ಅಭಿಪ್ರಾಯಪಟ್ಟಿದ್ದಾರೆ.
ಮಂಗಳವಾರ ಮಹದೇವಪುರ ಕ್ಷೇತ್ರದ ಹಂಚರಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ವಿವೇಕಾನಂದರ 153ನೆ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಯುವಕರು ದುಶ್ಚಟಗಳಿಗೆ ಬಲಿಯಾಗಿ ತಮ್ಮ ಅಮೂಲ್ಯ ಜೀವನ, ಪ್ರಾಣಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಅವರನ್ನು ಸರಿದಾರಿಗೆ ಕರೆ ತರಬೇಕಾದರೆ ಸ್ವಾಮಿ ವಿವೇಕಾನಂದರ ಆದರ್ಶ, ಮೌಲ್ಯಗಳನ್ನು ಯುವ ಸಮೂಹಕ್ಕೆ ಪರಿಚಯಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಸ್ವಾಮಿ ವಿವೇಕಾನಂದ ಸರ್ವ ಕಾಲಕ್ಕೂ ಪ್ರಸ್ತುತವಾಗುವಂತಹ ಮೇರು ವ್ಯಕ್ತಿತ್ವವನ್ನು ಹೊಂದಿದ್ದರು. ಅಂತಹವರ ಹೆಸರಿನಲ್ಲಿ ಪ್ರತಿಷ್ಠಾನವನ್ನು ಸ್ಥಾಪನೆ ಮಾಡಿದ್ದು ನಿಜಕ್ಕೂ ಸಂತಸ ತಂದಿದೆ. ಯುವ ಪೀಳಿಗೆಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ನಮ್ಮ ಸಂಘಟನೆಯ ವತಿಯಿಂದ ಹೆಚ್ಚು ಹೆಚ್ಚು ಆಯೋಜಿಸಲಾಗುವುದು ಎಂದು ಅವರು ತಿಳಿಸಿದರು.ದೇ ಸಂದರ್ಭದಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಷ್ಠಾನದ ವತಿಯಿಂದ ವಿದ್ಯಾರ್ಥಿವೇತನವನ್ನು ಪ್ರದಾನ ಮಾಡಲಾಯಿತು. ಜ.14ರಂದು ಎನ್ನೆಸ್ಸೆಸ್ ಶಿಬಿರಬೆಂಗಳೂರು, ಜ.12 : ನೆಹರೂ ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನದನಿ ಸಾಮಾಜಿಕ ಮತ್ತು ವೈಜ್ಞಾನಿಕ ಯುವ ಸಂಸ್ಥೆ ಸಹಯೋಗದೊಂದಿಗೆ ಜ.14 ರಂದು ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಗ್ರಾಮದಲ್ಲಿ ವಿವೇಕಾನಂದರ 153ನೆ ಜನ್ಮ ದಿನಾಚರಣೆ ಹಾಗೂ ಯುವ ಸಪ್ತಾಹ ಒಂದು ದಿನದ ಎನ್ನೆಸ್ಸೆಸ್ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಇಲಾಖೆಯ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News