ಜ.20ರಂದು ಪ್ರತಿಭಾ ಪುರಸ್ಕಾರ ಸಮಾರಂಭ
Update: 2016-01-16 18:33 GMT
ಬೆಂಗಳೂರು, ಜ. 16: ಕಳೆದ ಸಾಲಿನ ಕನ್ನಡ ಮಾಧ್ಯಮದಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ರಾಜ್ಯದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಸಾಹಿತ್ಯ ಪರೀಕ್ಷೆಗಳು ಹಾಗೂ ಶಾಸನಶಾಸ್ತ್ರ ಡಿಪ್ಲೊಮಾ ಪರೀಕ್ಷೆಗಳಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಜ.20ರಂದು ಕಸಾಪದಲ್ಲಿ ಪ್ರತಿಭಾ ಪುರಸ್ಕಾರವನ್ನು ಪ್ರದಾನಿಸಲಾಗುವುದು.
ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಎಲ್.ಹನುಮಂತಯ್ಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಪ್ರದಾನಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಕೆ.ಎ.ದಯಾನಂದ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ