ಮಹಿಳೆಯ ಕೊಲೆ: ಆರೋಪಿಯ ಬಂಧನ

Update: 2016-01-16 18:36 GMT

ಬೆಂಗಳೂರು, ಜ. 16: ಮಹಿಳೆಯೊಬ್ಬರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

  ಬಂಧಿತ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕಿನ ಚೌಳಹಿರಿಯೂರು ಮೂಲದ ಸಿ.ಕುಮಾರಸ್ವಾಮಿ (45) ಎಂದು ಗುರುತಿಸಲಾಗಿದೆ. ಆರೋಪಿಯು ಬಸವೇಶ್ವರ ನಗರದ ನಿವಾಸಿ ಪದ್ಮಾ (35) ಎಂಬಾಕೆಯ ಜತೆ ಅನೈತಿಕ ಸಂಬಂಧ ಹೊಂದಿದ್ದ. ಕುಮಾರಸ್ವಾಮಿಯನ್ನು ತನ್ನೊಂದಿಗೆ ಇರುವಂತೆ ಪದ್ಮಾ ಒತ್ತಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಬೇಸತ್ತ ಕುಮಾರಸ್ವಾಮಿ, ಜ. 10ರಂದು ಆಕೆಯನ್ನು ಉಸಿರುಗಟ್ಟಿಸಿ ಹತ್ಯೆಗೈದಿದ್ದ. ಈ ಸಂಬಂಧ ಪದ್ಮಾಳ ಪತಿ ನಾಗರಾಜ್ ನೀಡಿದ ದೂರಿನ ಮೇಲೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಈ ಸಂಬಂಧ ಬಸವೇಶ್ವರ ನಗರ ಠಾಣಾ ಪೊಲೀಸರು ಮೊಕದ್ದಮೆ ದಾಖಲು ಮಾಡಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News