ಉದ್ಯೋಗ ಖಾತರಿ: ಪ್ರಗತಿ ಹೆಚ್ಚಳಕ್ಕೆ ಸೂಚನೆ

Update: 2016-01-20 18:37 GMT

ರಾಮರಾಜನಗರ, ಜ.20: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಪ್ರತಿನಿತ್ಯ 20 ಸಾವಿರ ಜನರ ಕೆಲಸ ನಿರ್ವಹಣೆಯಾಗಿರಬೇಕು ಎಂದು ಜಿಪಂ ಸಿಇಒ ಡಾ.ಕೆ.ಎಚ್.ನರಸಿಂಹಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
 ಜಿಪಂ ಸಭಾಂಗಣದಲ್ಲಿ ಇಂದು ನಡೆದ ತಾಪಂ ಇಒಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಸಭೆೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ನಿಗದಿತ ಗುರಿಯನ್ನು ಮುಟ್ಟಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಪ್ರಗತಿ ಹೆಚ್ಚಳವಾಗುವಂತೆ ಕ್ರಮವಹಿಸಬೇಕು ಎಂದು ತಿಳಿಸಿದರು.ದ್ಯೋಗ ಖಾತರಿಯಲ್ಲಿ ಬೇರೆ ಇಲಾಖೆಯ ಸಮನ್ವಯ ಕಾಮಗಾರಿಗಳನ್ನು ಹೆಚ್ಚು-ಹೆಚ್ಚಾಗಿ ಮಾಡಿ ಗುರಿಯನ್ನು ಮುಟ್ಟಬೇಕು. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳಲ್ಲಿ ಸಮನ್ವಯ ಕಾಮಗಾರಿಗಳನ್ನು ಗುರುತಿಸಿ, ಜನರಿಗೆ ಕೆಲಸ ಕೊಡಬೇಕು ಎಂದು ತಿಳಿಸಿದರು.ೃಷಿ ಇಲಾಖೆಯು ರೈತರ ಭೂ ಅಭಿವೃದ್ಧಿ, ಬದು ನಿರ್ಮಾಣ, ಮಲ್ಟಿ ಆರ್ಚ್ ಚೆಕ್‌ಡ್ಯಾಂ, ಮಳೆ ನೀರು ಹಿಂಗು ಕಾಲುವೆ, ಒಕ್ಕಣೆ ಕಣ, ಎರೆಹುಳು ಘಟಕ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಕೃಷಿ ಹೊಂಡವು ರೈತರಿಗೆ ಬಹಳ ಉಪಯುಕ್ತವಾಗಿದ್ದು, ಅರ್ಹ ಫಲಾನುಭವಿ ಹಾಗೂ ಸೂಕ್ತ ಜಾಗವನ್ನು ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡಿ, ಕೆಲಸವನ್ನು ಪ್ರಾರಂಭಿಸಬೇಕು. ತಾಪಂ ಇಒ ಅಧಿಕಾರಿಗಳು ಇನ್ನೂ ಮೂರು ದಿನಗಳಲ್ಲಿ ಈ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ತಯಾರು ಮಾಡಬೇಕು ಎಂದು ತಿಳಿಸಿದರು.
ತೋಟಗಾರಿಕೆ ಇಲಾಖೆಯಿಂದ ಪೌಷ್ಠಿಕ ಕೈ ತೋಟ ನಿರ್ಮಾಣ ಮಾಡಲು ಉದ್ಯೋಗ ಖಾತರಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಲ್ಲಿ ಜಾಬ್ ಕಾರ್ಡ್ ಹೊಂದಿರುವ ಫಲಾನುಭವಿಗೆ ತೋಟಗಾರಿಕೆ ಇಲಾಖೆಯಿಂದ ಗಿಡಗಳನ್ನು ಕೊಡಲಾಗುತ್ತದೆ. ಆದ್ದರಿಂದ ಇದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಸಭೆೆಯಲ್ಲಿ ಉಪ ಕಾರ್ಯದರ್ಶಿ ಮುನಿರಾಜಪ್ಪ, ಸಹಾಯಕ ಯೋಜನಾಧಿಕಾರಿ ಸಿದ್ದಲಿಂಗಸ್ವಾಮಿ ಸೇರಿದಂತೆ ತಾಪಂ ಇಒ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News