2.90 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶ

Update: 2016-01-22 18:44 GMT

ಬೆಂಗಳೂರು, ಜ. 22: ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಅಧಿಸೂಚನೆ ಪ್ರಕಟವಾಗಿದ್ದು, ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದ್ದರೂ, ನೆಲಮಂಗಲ ತಾಲೂಕು ಬಿಲ್ಲಿನಕೋಟೆ ಗ್ರಾಮದಲ್ಲಿ 238ಲೀ.ಮದ್ಯ ಹಾಗೂ 214ಲೀ. ಬಿಯರ್‌ನ್ನು ಅಕ್ರಮವಾಗಿ ದಾಸ್ತಾನು ಮಾಡಿರುವುದನ್ನು ಅಬಕಾರಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ.ಭರತ್ ಎಂಬವರನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದೇ ರೀತಿ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ಅರೇಹಳ್ಳಿ ಕ್ರಾಸ್ ಬಳಿ ದ್ವಿಚಕ್ರ ವಾಹನಲ್ಲಿ 5ಲೀ. ಮದ್ಯ ಹಾಗೂ 7ಲೀ. ಬಿಯರ್‌ನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿರುವುದನ್ನು ಅಬಕಾರಿ ಅಧಿಕಾರಿಗಳು ಪತ್ತ್ತೆಹಚ್ಚಲಾಗಿದೆ. ಈ ಸಂಬಂಧ ಮುನಿರಾಜು ಮತ್ತು ರವಿಕುಮಾರ್‌ನನ್ನು ದಸ್ತಗಿರಿ ಮಾಡಲಾಗಿದೆ. ಈ ಪ್ರಕರಣದಲ್ಲಿ ಒಟ್ಟು 2.90ಲಕ್ಷ ರೂ.ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿರುವುದಲ್ಲದೆ, ಜಿಲ್ಲೆಯಲ್ಲಿ ಅಕ್ರಮ ಮದ್ಯ ಸಾಗಣೆ ಮೇಲೆ ವಿಶೇಷ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಸ್.ಪಾಲಯ್ಯ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News