ಜಿಪಂ, ತಾಪಂ ಚುನಾವಣೆ: ಆಯುಧಗಳನ್ನು ಒಪ್ಪಿಸಲು ಜಿಲ್ಲಾಧಿಕಾರಿ ಸೂಚನೆ

Update: 2016-01-25 18:26 GMT

ಬೆಂಗಳೂರು, ಜ, 25: ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ಅಂಗವಾಗಿ ಮತದಾನ ಮತ್ತು ಮತ ಎಣಿಕೆ ಕಾರ್ಯವನ್ನು ಸುಗಮವಾಗಿ ನಡೆಸುವ ಸಂಬಂಧ ಬೆಂ.ನಗರ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳ ಸಾರ್ವಜನಿಕರು ತಾವು ಹೊಂದಿರುವ ಆಯುಧಗಳನ್ನು ಚುನಾವಣೆ ಮುಕ್ತಾಯವಾಗುವವರೆಗೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಒಪ್ಪಿಸಬೇಕು ಎಂದು ಬೆಂ.ನಗರ ಜಿಲ್ಲಾಧಿಕಾರಿ ವಿ.ಶಂಕರ್ ಆದೇಶಿಸಿದ್ದಾರೆ.

ಕರ್ನಾಟಕ ಆಯುಧಗಳ ಅಧಿನಿಯಮ-1959ರ ಅನ್ವಯ ಜ.24ರ ರಾತ್ರಿ 12ಗಂಟೆಯಿಂದ ಫೆ.24ರ ರಾತ್ರಿ 12ಗಂಟೆಯವರೆಗೆ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಎಡೆ ಮಾಡಿಕೊಡದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಸಾರ್ವಜನಿಕರು ಹೊಂದಿರುವ ಗನ್/ರಿವಾಲ್ವರ್ ಇತ್ಯಾದಿಗಳನ್ನು ಚುನಾವಣೆ ಮುಕ್ತಾಯವಾಗುವವರೆಗೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಒಪ್ಪಿಸಬೇಕೆಂದು ಅವರು ಕಟ್ಟಪ್ಪಣೆ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News