ಬೆಂಗಳೂರು : ಏಪ್ರಿಲ್‌ನಿಂದ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ 12 ಗಂಟೆಗಳ ಕಾಲ ತ್ರೀಫೇಸ್ ವಿದ್ಯುತ್
ಬೆಂಗಳೂರು,ಜ.27: ರೈತ ಸಮುದಾಯಕ್ಕೆ ವಿದ್ಯುತ್ ಕೊರತೆಯನ್ನು ನೀಗಿಸಲು ಇಂಧನ ಇಲಾಖೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಬರುವ ಏಪ್ರಿಲ್‌ನಿಂದ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ 12 ಗಂಟೆಗಳ ಕಾಲ ತ್ರೀಫೇಸ್ ವಿದ್ಯುತ್ ಒದಗಿಸಲು ಉದ್ದೇಶಿಸಿದೆ. ಏಪ್ರಿಲ್ ವೇಳೆಗೆ ರಾಜ್ಯದ ಜಾಲಕ್ಕೆ ಸಾಕಷ್ಟು ಪ್ರಮಾಣದಲ್ಲಿ ವಿದ್ಯುತ್ ಸೇರ್ಪಡೆಯಾಗಲಿದೆ. ಬಳ್ಳಾರಿ ಉಷ್ಣ ವಿದ್ಯುತ್ ಘಟಕದ ಮೂರನೇ ಸ್ಥಾವರದಿಂದ 700ಮೆಗಾವ್ಯಾಟ್‌ನಷ್ಟು ವಿದ್ಯುತ್ ಲಭ್ಯವಾಗಲಿದ್ದು ಯರಮರಸ್ ಸೇರಿದಂತೆ ಬೇರೆ ಮೂಲಗಳಿಂದ ಇನ್ನೂ 2100 ಮೆಗಾ
್ಯಾಟ್‌ನಷ್ಟು ವಿದ್ಯುತ್ ಲಭ್ಯವಾಗಲಿದೆ. ಈ ಮೂಲಕ ರೈತರಿಗೆ ಸೂಕ್ತ ಪ್ರಮಾಣದಲ್ಲಿ ವಿದ್ಯುತ್ ಒದಗಿಸಲು ಮುಂದಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಅರ್ದ ಅವಧಿ ಪೂರ್ಣಗೊಳಿಸಿದ್ದು, ಬರುವ ದಿನಗಳಲ್ಲಿ ರಾಜ್ಯ ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಮಾರ್ಗೋಪಾಯಗಳತ್ತ ಗಮನ ಕೇಂದ್ರೀಕರಿಸಿದೆ. ನಾಡಿನ ಜನರಿಗೆ ಪೂರಕವಾದ ಹಲವು ಕಾರ್ಯಕ್ರಮಗಳನ್ನು ನೀಡಲು ಕಾರ್ಯತತ್ಪರವಾಗಿದೆ. ಸಧ್ಯಕ್ಕೆ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ದಿನಕ್ಕೆ ಏಳು ಗಂಟೆಗಳ ಕಾಲ ವಿದ್ಯುತ್ ನೀಡುತ್ತಿದ್ದರೂ ಸಕಾಲಕ್ಕೆ ವಿದ್ಯುತ್ ಒದಗಿಸುತ್ತಿಲ್ಲ ಎಂಬ ಅಸಮಾಧಾನ ಕೇಳಿ ಬರುತ್ತಲೇ ಇದೆ.
ಹೀಗಾಗಿ ರಾಜ್ಯದಲ್ಲಿ ಹೆಚ್ಚಲಿರುವ ವಿದ್ಯುತ್ ಉತ್ಪಾದನೆಯನ್ನು ಗಮನದಲ್ಲಿಟ್ಟುಕೊಂಡು, ಅದೇ ರೀತಿ ಬೇರೆಡೆಯಿಂದ ವಿದ್ಯುತ್ ಖರೀದಿಸಿಯಾದರೂ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ದಿನಕ್ಕೆ ಹನ್ನೆರಡು ಗಂಟೆಗಳ ಕಾಲ ವಿದ್ಯುತ್ ನೀಡುವುದು ಸೂಕ್ತ ಎಂಬ ಅಭಿಪ್ರಾಯ ಕೇಳಿ ಬಂದಿದೆ.
ಇದೇ ತಿಂಗಳ 20 ರಿಂದ 2015-16 ನೇ ಸಾಲಿನ ಬಜೆಟ್ ಮೇಲಿನ ಚರ್ಚೆ ಆರಂಭವಾಗಲಿದ್ದು ಈ ಸಂದರ್ಭದಲ್ಲಿ ಈ ಕುರಿತು ವಿವರವಾಗಿ ಚರ್ಚೆ ನಡೆಯಲಿದೆ ಎಂದು ಉನ್ನತ ಮೂಲಗಳು ವಿವರ ನೀಡಿವೆ.
ರಾಜ್ಯದ ಮದ್ಯಮ ವರ್ಗಕ್ಕೆ ಈ ಬಾರಿಯ ಬಜೆಟ್‌ನಲ್ಲಿ ವಿಶೇಷ ಆದ್ಯತೆ ನೀಡುವಂತಹ ಕಾರ್ಯಕ್ರಮಗಳನ್ನು ನೀಡಬೇಕು ಎಂಬ ಅಭಿಪ್ರಾಯವೂ ಯೋಜನಾ ಮಂಡಳಿಯಿಂದ ವ್ಯಕ್ತವಾಗಿದ್ದು ಈ ಕುರಿತೂ ಚರ್ಚೆ ನಡೆಯಲಿದೆ.
ಪ್ರತಿಯೊಂದು ಇಲಾಖೆಗಳ ಪ್ರಮುಖರನ್ನು ಜನವರಿ ಇಪ್ಪತ್ತರಿಂದ ಮೂವತ್ತರ ತನಕ ಕರೆಸಿ ಸಭೆ ನಡೆಸಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಬಾರಿಯ ಬಜೆಟ್‌ನಲ್ಲಿ ಜನಸಾಮಾನ್ಯರಿಗೆ ಬಂಪರ್ ಕೊಡುಗೆಗಳನ್ನು ಪ್ರಕಟಿಸುವ ನಿರೀಕ್ಷೆ ಇದೆ.