ಬಂಡವಾಳ ಹೂಡಿಕೆ ಸಮಾವೇಶಕ್ಕೆ ವಿರೋಧವಾಗಿ ಕತ್ತೆಗಳ ಸಮ್ಮೇಳನ: ವಾಟಾಳ್
Update: 2016-02-01 18:17 GMT
ಬೆಂಗಳೂರು, ಫೆ.1: ಸರಕಾರ ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಬಂಡವಾಳ ಹೂಡಿಕೆ ಸಮಾವೇಶಕ್ಕೆ ವಿರೋಧವಾಗಿ ಕತ್ತೆಗಳ ಸಮ್ಮೇಳನವನ್ನು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬೆಳಗ್ಗೆ 10:30ಕ್ಕೆ ಆಯೋಜಿಸಲಾಗಿದೆ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಸೋಮವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಕೃಷಿ ಭೂಮಿಯನ್ನು ಕಿತ್ತು, ಉದ್ಯಮಿಗಳಿಗೆ ಕೊಡುವುದು ಸರಿಯಲ್ಲ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಡವಾಳ ಹೂಡಿಕೆ ಸಮಾವೇಶವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.
ಈಗಾಗಲೇ ರಾಜ್ಯದ ಅರ್ಧದಷ್ಟು ಭೂಮಿ ಉದ್ಯಮಿಗಳ ಪಾಲಾಗಿದೆ. ಈಗಿರುವ ಅಲ್ಪ-ಸ್ವಲ್ಪ ಜಾಗದಲ್ಲಿ ಕೋಟ್ಯಂತರ ಬಡ ಕುಟುಂಬಗಳು ಜೀವನ ಸಾಗಿಸುತ್ತಿವೆ. ಇವರ ಜಮೀನನ್ನು ವಿದೇಶಿ ಉದ್ಯಮಿಗಳಿಗೆ ಕೊಟ್ಟರೆ ರೈತರ ಪಾಡೇನು. ರೈತರನ್ನು ಬೀದಿಪಾಲು ಮಾಡುವ ಉದ್ದೇಶದಿಂದ ಬಂಡವಾಳ ಹೂಡಿಕೆ ಸಮಾವೇಶ ನಡೆಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.