ತಂಬಾಕು ಪೊಟ್ಟಣಗಳ ಮೇಲೆ ಎಚ್ಚರಿಕೆ ಚಿತ್ರ ಬಿಡಿಸಲು ಸುತ್ತೋಲೆ: ಸರಕಾರದ ಪರವಕೀಲರು ಹಾಜರಾಗದ ಹಿನ್ನೆಲೆಯಲ್ಲಿ ಹೈಕೋರ್ಟ್

Update: 2016-02-16 18:24 GMT

 ಬೆಂಗಳೂರು, ಫೆ.16: ಬೀಡಿ ಸೇರಿದಂತೆ ತಂಬಾಕು ಉತ್ಪನ್ನದ ಪೊಟ್ಟಣಗಳ ಮೇಲೆ ‘ಬೀಡಿ ಸೇವನೆ ಆರೋಗ್ಯಕ್ಕೆ ಹಾನಿಕರ’ ಎಂದು ಶೇ.85ರಷ್ಟು ಚಿತ್ರಾತ್ಮಕವಾಗಿ ಎಚ್ಚರಿಕೆ ಪ್ರಕಟಿಸಬೇಕೆಂಬ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಕೇಂದ್ರ ಸರಕಾರದ ಪರ ವಕೀಲರು ಹಾಜರಾಗದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

 ಮಂಗಳೂರಿನ ಕರ್ನಾಟಕ ಬೀಡಿ ಉದ್ಯಮ ಸಂಸ್ಥೆ ಸೇರಿದಂತೆ ಮತ್ತಿತರ ಬೀಡಿ ಮತ್ತು ಸಿಗರೇಟ್ ಕಂಪೆನಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಮಳೀಮಠ ಅವರಿದ್ದ ನ್ಯಾಯಪೀಠ, ವಿಚಾರಣೆ ವೇಳೆ ಕೇಂದ್ರ ಸರಕಾರದ ಪರ ವಕೀಲರು ಹಾಜರಾಗದೆ ಅರ್ಜಿದಾರರಿಗೆ ಪರೋಕ್ಷವಾಗಿ ಸಹಕಾರ ನೀಡುತ್ತಿದ್ದಾರೆಯೇ ಎಂದು ಪ್ರಶ್ನಿಸಿತು. ಅರ್ಜಿಯ ಸಂಬಂಧ ಹೈಕೋರ್ಟ್ ಸುತ್ತೋಲೆಗೆ ಈ ಹಿಂದೆ ನೀಡಿದ್ದ ತಡೆ ತೆರವು ಕೋರಿ ಹೆಲ್ತ್ ಫಾರ್ ಮಿಷನ್ ಮತ್ತು ಕ್ಯಾನ್ಸ್‌ರ್ ರೋಗಿಗಳ ಸಂಘ ಸಲ್ಲಿಸಿದ್ದ ಮಧ್ಯಂತರ ಅರ್ಜಿಗಳನ್ನು ಪರಿಗಣಿಸುವುದಕ್ಕೆ ಸಾಧ್ಯವೇ ಎಂಬುದನ್ನು ಮುಂದಿನ ವಿಚಾರಣೆ ವೇಳೆ ತಿಳಿಸಬೇಕು. ಆರೋಗ್ಯಕ್ಕೆ ಸಂಬಂಧಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ಗಳು ತಡೆ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ ಆದೇಶವಿದ್ದು, ತಡೆ ಮುಂದುವರೆಸುವ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಸರಕಾರದ ಪರ ವಕೀಲರಿಗೆ ನ್ಯಾಯಪೀಠಕ್ಕೆ ತಿಳಿಸುವಂತೆ ಸೂಚನೆ ನೀಡಿದೆ.

  ಬೀಡಿ, ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳ ಮೇಲೆ ‘ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ’ ಎಂಬುದಾಗಿ ಪೊಟ್ಟಣದ ಶೇ.85ರಷ್ಟು ಭಾಗದಲ್ಲಿ ಚಿತ್ರಾತ್ಮಕವಾಗಿ ಎಚ್ಚರಿಕೆಯ ಸಂದೇಶವನ್ನು ಪ್ರಕಟಿಸಬೇಕು ಎಂದು ಸುತ್ತೋಲೆ ಹೊರಡಿಸಿತ್ತು. ಈ ಸುತ್ತೋಲೆಯ ಪ್ರಕಾರ 2016ರ ಮಾರ್ಚ್ ರಿಂದ ಎಲ್ಲ ಬೀಡಿ ಪೊಟ್ಟಣಗಳ ಮೇಲೆ ಕಡ್ಡಾಯವಾಗಿ ಎಚ್ಚರಿಕೆಯ ಸಂದೇಶವನ್ನು ಪ್ರಕಟಿಸಬೇಕಾಗಿತ್ತು. ಕೇಂದ್ರ ಸರಕಾರದ ಸುತ್ತೋಲೆಯನ್ನು ಪ್ರಕಟಿಸುವುದಕ್ಕೆ ಕಷ್ಟಸಾಧ್ಯವಾಗಿದ್ದು, ಸುತ್ತೋಲೆ ರದ್ದು ಮಾಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು. ಕೇಂದ್ರ ಸಕಾರದ ಸುತ್ತೋಲೆಗೆ ಹೈಕೋರ್ಟ್ ಈ ಹಿಂದೆ ತಡೆ ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News