ರಿಕ್ಷಾಗೆ ಕಾರು ಢಿಕ್ಕಿ: ಚಾಲಕ ಸಾವು
Update: 2016-03-02 18:24 GMT
ಬೆಂಗಳೂರು, ಮಾ. 2: ಆಟೊರಿಕ್ಷಾಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಆಟೊ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿ ಸಂಭವಿಸಿದೆ.
ಆಟೊ ಚಾಲಕನನ್ನು ನಗರದ ತಗಚೆಗುಪ್ಪೆ ನಿವಾಸಿ ಹರಿಶೇಖರ್(32) ಎಂದು ಗುರುತಿಸಲಾಗಿದೆ.
ರಿಕ್ಷಾ ಚಾಲಕ ಇಂದು ಬೆಳಗ್ಗೆ 11 ಗಂಟೆಗೆ ಇಲ್ಲಿನ ಮೈಸೂರು ರಸ್ತೆಯಲ್ಲಿರುವ ಪೆಪ್ಸಿ ಕಾರ್ಖಾನೆ ಗೇಟ್ ಬಳಿ ಹೋಗುವಾಗ ಅತೀ ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಆಟೊ ಚಾಲಕ ಹರಿಶೇಖರ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿ ದ್ದಾರೆ.
ಈ ಸಂಬಂಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.