ಕಂಪ್ಯೂಟರ್ ತರಬೇತಿಗೆ ಅರ್ಜಿ ಆಹ್ವಾನ

Update: 2016-03-12 18:12 GMT

ಬೆಂಗಳೂರು, ಮಾ.12: ಕನ್ನಡ ಗಣಕ ಉಚಿತ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಕನ್ನಡ ಮತ್ತು ಆಂಗ್ಲ ಕಂಪ್ಯೂಟರ್ ತಂತ್ರಾಂಶ ತರಬೇತಿಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ, ಆರ್ಥಿಕವಾಗಿ ಹಿಂದುಳಿದ ಪ್ರತಿಯೊಬ್ಬರು ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತರು ಎಸೆಸೆಲ್ಸಿ ಅಂಕಪಟ್ಟಿ, ಖಾಯಂ ವಿಳಾಸದ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ಅರ್ಜಿಯನ್ನು ಕನ್ನಡ ಗಣಕ ಉಚಿತ ತರಬೇತಿ ಕೇಂದ್ರ, 67/1, ಡಾ.ರಾಜ್‌ಕುಮಾರ್ ತಾಂತ್ರಿಕ ಕುಟೀರ, 6ನೆ ಅಡ್ಡರಸ್ತೆ, 5ನೆ ಮುಖ್ಯರಸ್ತೆ, ಮಲ್ಲೇಶ್ವರಂ ಬೆಂ-560003 ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.080-23567289ಕ್ಕೆ ಸಂಪರ್ಕಿಸಬೇಕು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News