‘ಅಂಬೇಡ್ಕರ್ ಭವನ ನಿರ್ಮಾಣಕ್ಕೆ 4 ಕೋ.ರೂ. ಮಂಜೂರಾತಿ’

Update: 2016-03-21 18:26 GMT

ಮಂಗಳೂರು, ಮಾ.21: ನಗರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ಮಿಸಲು ಸರಕಾರದಿಂದ 4 ಕೋ.ರೂ.ಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ಸಮಾಜ ಕಲ್ಯಾಣ, ಹಿಂದು ಳಿದ ವರ್ಗಗಳ ಸಚಿವ ಎಚ್. ಆಂಜನೇಯ ಹೇಳಿದ್ದಾರೆ.

ವಿಧಾನಪರಿಷತ್‌ನಲ್ಲಿ ಸದಸ್ಯ ಐವನ್ ಡಿಸೋಜ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಭವನ ನಿರ್ಮಾಣಕ್ಕೆ ಸರಕಾರದಿಂದ ಮಂಜೂರಾದ 4 ಕೋ.ರೂ.ಗಳಲ್ಲಿ ಮೊದಲನೆಯ ಕಂತಾಗಿ2 ಕೋ. ರೂ.ವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಯ ಜಂಟಿ ಖಾತೆಗೆ ಬಿಡುಗಡೆ ಮಾಡಲಾಗಿದೆ. ಕಟ್ಟಡವನ್ನು ಮಂಗಳೂರು ದೇರೆಬೈಲ್ ಗ್ರಾಮದ ಸರ್ವೇ ನಂ.178/1 ಪಿ2 ಹಾಗೂ 178/4 ಪಿ4ರಲ್ಲಿರುವ 1.61 ಸೆಂಟ್ಸ್ ವಿಸ್ತೀರ್ಣದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದವರು ಹೇಳಿದರು.

ದ.ಕ. ಜಿಲ್ಲೆಯಲ್ಲಿ 2015-16ನೆ ಸಾಲಿನಲ್ಲಿ ಪರಿಶಿಷ್ಟ ಜಾತಿಯವರ ಅನುಕೂಲಕ್ಕಾಗಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ಸಮುದಾಯ ಭವನಗಳನ್ನು ನಿರ್ಮಾಣ ಮಾಡಲು 4.17 ಕೋ.ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News