ಉಡುಪಿಯಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೆ ಕ್ರಮ

Update: 2016-03-21 18:27 GMT

ಉಡುಪಿ, ಮಾ.21: ರಾಜ್ಯ ಸರಕಾರದ ಅಧಿಸೂಚನೆಯಂತೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಫ್ಲೆಕ್ಸ್, ಬಾವುಟ, ತಟ್ಟೆ, ಲೋಟದಂಥವುಗಳ ಬಳಕೆ, ಮಾರಾಟವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಕ್ಕೆ ನಗರ ಸಭೆ ಮುಂದಾ ಗಿದೆ.
ಆದುದರಿಂದ ನಗರಸಭೆಯ ವ್ಯಾಪ್ತಿಯಲ್ಲಿ ಮೇಲೆ ಉಲ್ಲೇಖಿಸಿರು ವಂತಹ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆ, ತಯಾರಿಕೆ, ಸರಬರಾಜು, ಸಂಗ್ರಹ, ಸಾಗಣೆ, ಮಾರಾಟ ಹಾಗೂ ವಿತರಣೆ ಯನ್ನು ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸುವವರ ಮೇಲೆ ಕಾನೂನು ಕ್ರಮ ಜರಗಿಸಲಾಗುವುದು ಎಂದು ಪೌರಾಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News