ಅನಿಯಮಿತ ವಿದ್ಯುತ್ ವ್ಯತ್ಯಯ (ಪವರ್‌ಕಟ್) ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ಯಿಂದ ಪ್ರತಿಭಟನೆ

Update: 2016-03-22 14:21 GMT

ಉಳ್ಳಾಲ. ಮಾ, 22: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಂದೆ ಬರುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆ ತಯಾರಿ ನಡೆಸು ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯ (ಪವರ್‌ಕಟ್) ಮಾಡುವ ಮೂಲಕ ರಾಜ್ಯ ಸರಕಾರ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತದ್ದೆ ಎಂದು ಎಸ್‌ಡಿಪಿಐ ರಾಜ್ಯ ಸದಸ್ಯ ರಿಯಾರ್ ಪರಂಗಿಪೇಟೆ ಅರೋಪಿಸಿದರು.
 ಅವರು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ಮಂಗಳೂರು ವಿಧಾನ ಸಭಾ ಕ್ಷೇತ್ರ ಸಮಿತಿ ಆಶ್ರಯದಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯ (ಪವರ್‌ಕಟ್) ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳವಾರ ಉಳ್ಳಾಲ ಚೆಂಬುಗುಡ್ಡೆಯಲ್ಲಿ ಮೆಸ್ಕಾಂ ಕಚೇರಿ ಎದುರು ಹಮ್ಮಿಕೊಂಡಿದ್ದ ಪ್ರತಿಭಟನೆಯ ದಿಕ್ಸೂಸಿ ಭಾಷಣ ಮಾಡಿದರು.
    
 ಕೈಗಾರಿಕೆಗಳಿಗೆ ಪ್ಯಾಕೇಜ್ ಲೆಕ್ಕದಲ್ಲಿ ಅನಿಯಮಿತವಾಗಿ ವಿದ್ಯುತ್ ನೀಡುವ ರಾಜ್ಯ ಸರಕಾರ ರಾಜ್ಯದಲ್ಲಿ ವಿದ್ಯುತ್ ವ್ಯತ್ಯಯ(ಪವರ್ ಕಟ್) ಮಾಡುವ ಮೂಲಕ ಜನಸಾಮಾನ್ಯರು ಅದರಲ್ಲೂ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟ ಆಡುತ್ತಿರುವುದು ಖೇದನೀಯ. ಪರೀಕ್ಷಾ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯ ಮಾಡುವ ಮೂಲಕ ವಿದ್ಯಾರ್ಥಿಗಳ ಕಲಿಕೆಗೆ ಬಾಧಕವಾಗುತ್ತಿದ್ದು, ಪರೀಕ್ಷಾ ಪಲಿತಾಂಶಕ್ಕೆ ಮಾರಕವಾಗಿ ಪರಿಣಮಿಸಲಿದ್ದು, ಕಟ್ಟು ನಿಟ್ಟಾಗಿ ವಿದ್ಯುತ್ ಶುಲ್ಕ ವಿಸುವ ಸರಕಾರಕ್ಕೆ ಅದೇ ರೀತಿಯಲ್ಲಿ ವಿದ್ಯುತ್ ನೀಡಬೇಕು ಅಥವಾ ಅದಕ್ಕೆ ಪರ್ಯಾಯ ಕ್ರಮಗಳನ್ನು ಅನುಸರಿಬೇಕು ಎನ್ನುವ ವಿವೇಚನೆ ಇಲ್ಲ ಎಂದ ಅವರು ಕೈಗಾರಿಕೆಗಳಿಗೆ ನೀಡುವ ವಿದ್ಯುತ್ ಸ್ಥಗಿತಗೊಳಿಸಿ ವಿದ್ಯಾರ್ಥಿಗಳಿಗೆ ಪೂರಕವಾಗಿ ವಿದ್ಯುತ್ ನೀಡುವ ಕಾರ್ಯ ಮಾಡಬೇಕು ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದರು. ಎಸ್‌ಡಿಪಿಐ ಜಿಲ್ಲಾ ಸದಸ್ಯ ಅಶ್ರಫ್ ಮಂಚಿ ಮಾತನಾಡಿ ರಾಜ್ಯದ ಜನತೆಯಿಂದ ಮತ ಪಡೆದು ಗೂಟದ ಕಾರಿನಲ್ಲಿ ತಿರುಗುವ ಜನಪ್ರತಿನಿಗಳಿಗೆ ಕೇವಲ ಉದ್ಘಾಟನೆ, ಶಿಲಾನ್ಯಾಸ, ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದೇ ಒಂದು ಉದ್ಯೋಗವಾಗಿದೆ. ಜನರ ಮೂಲಭೂತ ಸಮಸ್ಯೆಗಳ ಬಗ್ಗೆ ಚಿಂತನೆ ನಡೆಸದಿರುವುದು ಖೇದನೀಯ ಎಂದರು. ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವಾರ್ ಉಳ್ಳಾಲ, ಎಸ್‌ಡಿಪಿಐ ಮಂಗಳೂರು ವಿಧಾನ ಸಭಾ ಕ್ಷೇತ್ರಾಧ್ಯಕ್ಷ ಲತೀಫ್ ಕೋಡಿಜಾಲ್, ಉಪಾಧ್ಯಕ್ಷ ಇರ್ಷಾದ್ ಕೆ.ಸಿ.ರೋಡ್, ನೌಷದ್ ಕಲ್ಕಟ್ಟ ಉಪಸ್ಥಿತರಿದ್ದರು
 ಎಸ್‌ಡಿಪಿಐ ಮಂಗಳೂರು ವಿಧಾನ ಸಭಾ ಪ್ರಧಾನ ಕಾರ್ಯದರ್ಶಿ ಹಾರಿಸ್ ಮಲಾರ್ ಸ್ವಾಗತಿಸಿದರು. ಕಾರ್ಯದರ್ಶಿ ಅಬ್ದುಲ್ ಖಾದರ್ ಅಮ್ಮೆಮಾರ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News