ಕೋರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ

Update: 2016-03-30 18:45 GMT

ಪಡುಬಿದ್ರೆ, ಮಾ.30: ಇನ್ನಾ ಗ್ರಾಪಂ ವ್ಯಾಪ್ತಿಯ ಅಪಾಯಕಾರಿ ಕೋರೆಯೊಂದರಲ್ಲಿ ಮಹಿಳೆಯೋರ್ವರ ಮೃತದೇಹ ಬುಧವಾರ ಸಂಜೆ ಪತ್ತೆಯಾಗಿದೆ. ಮೃತರನ್ನು ಇನ್ನಾ ಗುರ್ಮೆರಪದವಿನ ಎಸ್‌ಟಿ ಕಾಲನಿ ನಿವಾಸಿ ಮೋಹಿನಿ (35) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಮನೆಯಿಂದ ಹೊರಟು ಬಳಿಕ ನಾಪತ್ತೆಯಾಗಿದ್ದರು. ಬುಧವಾರ ಸಂಜೆ ವೇಳೆಗೆ ಕೋರೆಯಲ್ಲಿ ಮೃತದೇಹ ತೇಲುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೋರೆಯ ಹಾದಿಯಲ್ಲಿ ಸಂಚರಿಸುವ ವೇಳೆ ಗುಂಡಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News