ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2016-03-31 18:30 GMT

ಬ್ರಹ್ಮಾವರ, ಮಾ.31: ವಿಪರೀತ ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಮಾ.30ರಂದು ರಾತ್ರಿ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಗ್ರಾಮದ ಕೋಟಂಬೈಲು ನಿವಾಸಿ ಲಲಿತಾ (50) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ: ಪತ್ನಿಯೊಂದಿಗಿನ ವಿರಸದಿಂದ ಮನನೊಂದು ಮಾ.29ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕುಮ್ರಗೋಡುವಿನ ಪ್ರಸಾದ್ ಪ್ರಶಾಂತ(33) ಎಂಬವರು ಮಾ.30ರಂದು ಅಪರಾಹ್ನ ವೇಳೆ ಉಡುಪಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News