ಎಪ್ರಿಲ್ ತಿಂಗಳ ಉದರದರ್ಶಕ ಶಸ್ತ್ರಚಿಕಿತ್ಸಾ ಶಿಬಿರಗಳು

Update: 2016-04-02 18:23 GMT

ಮಂಗಳೂರು, ಎ.2: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಎಪ್ರಿಲ್ ತಿಂಗಳಲ್ಲಿ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉದರದರ್ಶಕ ಶಸ್ತ್ರಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿದೆ.

ಎ.5ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಎ.6ರಂದು ಸಾರ್ವಜನಿಕ ಆರೋಗ್ಯ ಕೇಂದ್ರ ಮಾಣಿ, ಎ.12ರಂದು, ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ, ಎ. 13ರಂದು ಸಾರ್ವಜನಿಕ ಆಸ್ಪತ್ರೆ ಪುತ್ತೂರು, ಎ.15 ಪ್ರಾ.ಆ.ಕೇಂದ್ರ ಸುರತ್ಕಲ್, ಎ.16ರಂದು ತಾಲೂಕು ಆಸ್ಪತ್ರೆ ಸುಳ್ಯ, ಎ.18ರಂದು ಸ. ಆರೋಗ್ಯ ಕೇಂದ್ರ ಉಪ್ಪಿನಂಗಡಿ, ಎ. 20 ಸಾರ್ವಜನಿಕ ಆಸ್ಪತ್ರೆ ಪುತ್ತೂರು, ಎ.21 ಸ.ಆ.ಕೇಂದ್ರ ಕಡಬ, ಎ.26ರಂದು ಪ್ರಾ.ಆರೋಗ್ಯ ಕೇಂದ್ರ, ನಾಟೆಕಲ್, ಎ.28ರಂದು ಸ.ಆ.ಕೇಂದ್ರ ಮೂಡುಬಿದಿರೆಗಳಲ್ಲಿ ಉದರದರ್ಶಕ ಶಸ್ತ್ರ ಚಿಕಿತ್ಸೆ ಶಿಬಿರ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News