ನೆಟ್ಲ: ಎ.8ರಂದು ನಾಗಮಂಡಲ ಸೇವೆ

Update: 2016-04-03 18:36 GMT

ಬಂಟ್ವಾಳ, ಎ.3: ಮೊಗರ್ನಾಡು ಸಾವಿರ ಸೀಮೆಯ ನೆಟ್ಲದ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಅಷ್ಟಪವಿತ್ರ ನಾಗಮಂಡಲ ಸೇವೆಯು ಎ.8ರಂದು ನಡೆಯಲಿದೆ ಎಂದು ನಾಗಮಂಡಲೋತ್ಸವ ಸಮಿತಿಯ ಹಾಗೂ ನೆಟ್ಲ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ, ಸಚಿವ ಬಿ.ರಮಾನಾಥ ರೈ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು. ಎ. 4ರಿಂದಲೇ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಾಗಮಂಡಲಕ್ಕೆ ಚಾಲನೆ ದೊರೆಯಲಿದೆ. ಎ.6ರಂದು ಬೆಳಗ್ಗೆ 11:30ಕ್ಕೆ ಉಗ್ರಾಣ ಮುಹೂರ್ತ, ಸಂಜೆ 4ಕ್ಕೆ ಕಲ್ಲಡ್ಕದಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಎ.8ರಂದು ಬೆಳಗ್ಗೆ 12:30ಕ್ಕೆ ನಾಗದರ್ಶನ, ಪಲ್ಲಪೂಜೆ ನಡೆದು ಅಪರಾಹ್ನ 1 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 9ರಿಂದ ಅಷ್ಟಪವಿತ್ರ ನಾಗಮಂಡಲ ಸೇವೆ ನಡೆದು ಬಳಿಕ ಪ್ರಸಾದ ವಿತರಣೆ ನಡೆಯಲಿದೆ ಎಂದವರು ವಿವರಿಸಿದರು. ಪತ್ರಿಕಾಗೋಷ್ಠಿಯಲ್ಲಿ ನಾಗಮಂಡಲೋತ್ಸವ ಸಮಿತಿಯ ಅಧ್ಯಕ್ಷ ರುಕ್ಮಯ ಪೂಜಾರಿ, ನೆಟ್ಲ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ಬರಿಮಾರು, ವಿವಿಧ ಸಮಿತಿಗಳ ಪ್ರಮುಖರಾದ ಚಂದ್ರಪ್ರಕಾಶ ಶೆಟ್ಟಿ ತುಂಬೆ, ಗಣೇಶ್ ಶೆಟ್ಟಿ ಗೋಳ್ತಮಜಲು, ಪದ್ಮನಾಭ ರೈ, ಜಗನ್ನಾಥ ಚೌಟ, ಅನಂತ ಕಾಮತ್, ಆನಂದ ಸಾಲ್ಯಾನ್, ದೇವಸ್ಥಾನದ ಆಡಳಿತಾಧಿಕಾರಿ ಉಮೇಶ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News