ವಿಟ್ಲ: ಪಾದಾಚಾರಿಗೆ ಮರಳು ಲಾರಿ ಢಿಕ್ಕಿ, ಸಾರ್ವಜನಿಕರಿಂದ ರಸ್ತೆ ತಡೆದು ಪ್ರತಿಭಟನೆ

Update: 2016-04-04 15:01 GMT

ಬಂಟ್ವಾಳ: ಮರಳು ಸಾಗಟದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ವ್ರದ್ಧರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಾಲೆತ್ತೂರಿನ ಪುದ್ದೆಟ್ಟು ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದ್ದು, ಘಟನೆಯಿಂದ ಆಕ್ರೋಶಗೊಂಡ ನಾಗರಿಕರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಗಾಯಾಳು ವ್ಯಕ್ತಿಯನ್ನು ವಿಟ್ಲ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.
ರಸ್ತೆ ತಡೆಯಿಂದಾಗಿ ರಸ್ತೆ ಸಂಚಾರದಿಂದಾಗಿ ಸಂಚಾರ ಸ್ಥಗಿತಗೊಂಡು ಕೆಲ ಹೊತ್ತು ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ವಿಟ್ಲ ಠಾಣೆ ಪೊಲೀಸರು ಪ್ರತಿಭಟನಕಾರರ ಮನವೊಲಿಸಲು ಪ್ರಯತ್ನಪಟ್ಟರು. ಪ್ರತಿಭಟನೆಯನ್ನು ಹಿಂಪಡೆಯದ ಸಾರ್ವಜನಿಕರು ಮರಳು ಮಾಫಿಯಾ ಹಾಗೂ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಕೊನೆಗೂ ಪ್ರತಿಭಟನಕಾರರ ಮನವೋಲಿಸಿ ಪ್ರತಿಭಟನೆಯನ್ನು ಹಿಂಪಡೆಯುವಂತೆ ಮಾಡಿದ ಪೊಲೀಸರು ವಾಹನಗಳ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News