ಹಿರಿಯಡ್ಕ: ಎ.11ರಿಂದ ಚೆಸ್ ತರಬೇತಿ ಶಿಬಿರ

Update: 2016-04-08 18:25 GMT

 ಹಿರಿಯಡ್ಕ, ಎ.8: ಆರು ವರ್ಷಕ್ಕಿಂತ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಚೆಸ್ ತರಬೇತಿ ಶಿಬಿರವನ್ನು ಹಿರಿಯಡ್ಕದ ಶ್ರೀರಾಮ ಮಂದಿರದಲ್ಲಿ ಎ.11ರಿಂದ 18ರವರೆಗೆ ಪ್ರತಿದಿನ ಸಂಜೆ 5:30ರಿಂದ 6:30ರವರೆಗೆ ಹಮ್ಮಿಕೊಳ್ಳಲಾಗಿದೆ. ರೋಟರಿ ಕ್ಲಬ್ ಮಣಿಪಾಲ ಟೌನ್, ಪಳ್ಳಿ ಶ್ರೀನಿವಾಸ ಹೆಗ್ಡೆ ಚಾರಿಟೇಬಲ್ ಟ್ರಸ್ಟ್, ಕೊಟ್ನಕಟ್ಟೆ ಫ್ರೆಂಡ್ಸ್ ಸರ್ಕಲ್, ನರ್ತಕಿ ಫ್ರೆಂಡ್ಸ್ ಸೇವಾ ಟ್ರಸ್ಟ್ ಮತ್ತು ಜಿಎಸ್‌ಬಿ ಸೇವಾ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಶಿಬಿರ ನಡೆಯಲಿದೆ.

ಆಸಕ್ತರು ಮೊ.ನಂ.: 9740760567ನ್ನು ಸಂಪರ್ಕಿಸಿ ಹೆಸರು ನೋಂದಾ ಯಿಸಿಕೊಳ್ಳಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News