ಕಾಸರಗೋಡಿಗೆ ಕೇಂದ್ರ ಚುನಾವಣಾ ಆಯೋಗದ ನಿಯೋಗ ಆಗಮನ

Update: 2016-04-09 09:13 GMT

ಕಾಸರಗೋಡು, ಎ.9: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ವೀಕ್ಷಕರು ಶನಿವಾರ ಕಾಸರಗೋಡಿಗೆ ಆಗಮಿಸಿ ಪರಿಶೀಲನೆ ನಡೆಸಿದರು.
   ಕೇಂದ್ರ ರಕ್ಷಣಾ ಸಚಿವಾಲಯದ ಮಾಹಿತಿ ಸೇವಾ ನಿರ್ದೇಶಕ ಎ.ಒ.ನೂಸುಂಗ್ ಲಾಂಬ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಚುನಾವಣಾ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದರು. ಜಿಲ್ಲಾಧಿಕಾರಿ ದೇವದಾಸನ್, ಜಿಲ್ಲಾ ಪೊಲೀಸ್ ಮುಖ್ಯಸ್ಥ ಎ.ಶ್ರೀನಿವಾಸ್ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News