ಕಾಪು ಪುರಸಭೆ ಚುನಾವಣೆ: ಮೊದಲ ನಾಮಪತ್ರ ಸಲ್ಲಿಕೆ

Update: 2016-04-09 18:23 GMT

ಕಾಪು, ಎ.9: ಕಾಪು ಪುರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ಐದನೆ ದಿನವಾದ ಇಂದು ಮೊದಲ ನಾಮಪತ್ರ ಸಲ್ಲಿಕೆಯಾಗಿದ್ದು, ಈ ಮೂಲಕ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ಮುಸ್ಲಿಮ್ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಉಡುಪಿ ಜಿಲ್ಲಾಧ್ಯಕ್ಷ ಅನ್ವರ್ ಅಲಿ ಕಾಪು 17ನೆ ಬಡಗರಗುತ್ತು ವಾರ್ಡ್‌ನ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಎ.12ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News