ಪುತ್ತೂರು : ವಾರ್ಷಿಕ ಜಾತ್ರೋತ್ಸವಕ್ಕೆ ಚಾಲನೆ

Update: 2016-04-10 12:30 GMT

ಪುತ್ತೂರು: ಪುತ್ತೂರಿನ ಐತಿಹಾಸಿಕ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಭಾನುವಾರ ಬೆಳಿಗ್ಗೆ 9.48ರ ವೃಷಭ ಲಗ್ನದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು. ಇಂದಿನಿಂದ ಹತ್ತು ದಿನಗಳ ಕಾಲ ಜಾತ್ರೋತ್ಸವ ನಡೆಯಲಿದ್ದು, ಎ.17ರಂದು ಮಧ್ಯಾಹ್ನ ದರ್ಶನ ಬಲಿ, ರಾತ್ರಿ ಪುತ್ತೂರು ಬೆಡಿ ಮತ್ತು ಬ್ರಹ್ಮರಥೋತ್ಸವ ನಡೆಯಲಿದೆ. ಜಾತ್ರೋತ್ಸವಕ್ಕೆ ಪಿ.ಜಿ.ಜಗನ್ನಿವಾಸ್ ರಾವ್ ಮತ್ತು ಸಹೋದರ ಚಂದ್ರಶೇಖರ್ ಧ್ವಜಾರೋಹಣ ನೆರವೇರಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್. ಭಟ್, ಅರ್ಚಕ ಪ್ರೀತಂ ಪುತ್ತೂರಾಯ ವೈದಿಕ ವಿಧಿವಿಧಾನ ನೆರವೇರಿಸಿದರು. ಶಾಸಕಿ ಶಕುಂತಳಾ ಟಿ ಶೆಟ್ಟಿ, ನಗರಸಭಾ ಅಧ್ಯಕ್ಷೆ ಜಯಂತಿ ನಾಕ್ ಬಲ್ನಾಡು, ಉಪಾಧ್ಯಕ್ಷ ವಿಶ್ವನಾಥ ಗೌಡ ಬನ್ನೂರು, ಸದಸ್ಯ ರಾಜೇಶ್ ಬನ್ನೂರು, ದೇವಳದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ, ಸದಸ್ಯರಾದ ವಿಶ್ವ ಪುಂಡಿತ್ತೂರು, ಡಾ. ಸುಧಾ ಎಸ್. ರಾವ್, ಪ್ರಭಾ ಆಚಾರ್ಯ, ಆಡಳಿತಾಧಿಕಾರಿ ಜಗದೀಶ್ ಎಸ್, ಕಾರ್ಯನಿರ್ವಹಣಾಧಿಕಾರಿ ರವೀಂದ್ರ, ಬಲ್ನಾಡು ಉಳ್ಳಾಲ್ತಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ದೇವತಾ ಸಮಿತಿ ಅಧ್ಯಕ್ಷ ಎನ್.ಸುಧಾಕರ್ ಶೆಟ್ಟಿ, ಮಾಜಿ ಆಡಳಿತ ಮೊಕ್ತೇಸರ ಎನ್.ಕೆ. ಜಗನ್ನಿವಾಸ ರಾವ್, ಚಿದಾನಂದ ಬೈಲಾಡಿ, ರಮೇಶ್ ಬಾಬು, ಭಾಸ್ಕರ ಬಾರ್ಯ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಕೆಡಿಪಿ ಸದಸ್ಯ ಕೃಷ್ಣಪ್ರಸಾದ್ ಆಳ್ವ, ಉದ್ಯಮಿ ಕರುಣಾಕರ ರೈ ಸೇರಿದಂತೆ ನೂರಾರು ಮಂದಿ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಫೋಟೋ : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಗೆ ಧ್ವಜಾರೋಹಣ ನಡೆಸುತ್ತಿರುವುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News