ಕಾಸರಗೋಡು: ಪಟಾಕಿ ಮಳಿಗೆಗಳಿಗೆ ದಾಳಿ

Update: 2016-04-11 18:33 GMT

 ಕಾಸರಗೋಡು, ಎ.11: ಕೊಲ್ಲಂ ಪರವೂರು ದೇವಸ್ಥಾನದಲ್ಲಿ ಸಂಭವಿಸಿದ ದುರಂತದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕಾಸರಗೋಡು ಜಿಲ್ಲೆಯ ಸಿಡಿಮದ್ದು ಮಾರಾಟ ಮಳಿಗೆಗಳಿಗೆ ದಾಳಿ ನಡೆಸಿ ತಪಾಸಣೆ ನಡೆಸಲಾಗುತ್ತಿದೆ.

 ಜಿಲ್ಲೆಯ ಪಟಾಕಿ ಮಳಿಗೆಗಳಿಗೆ ಪೊಲೀಸರು ದಾಳಿ ನಡೆಸಿದ್ದು, ದೊಡ್ಡ ಪ್ರಮಾಣದ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ. ಜಿಲ್ಲೆಯ ಹಲವು ಕ್ಷೇತ್ರಗಳಲ್ಲಿ ಉತ್ಸವ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News