ಬಂಟ್ವಾಳ ಪೊಲೀಸರ ಕಾರ್ಯಾಚರಣೆ, ರೈಲಿನಲ್ಲಿ ಅಕ್ರಮ ಮರಳು ಸಾಗಟ ಪತ್ತೆ

Update: 2016-04-13 13:40 GMT

ಬಂಟ್ವಾಳ, ಎ. 13: ಮಂಗಳೂರಿನಿಂದ ಬೆಂಗಳೂರಿಗೆ ಅಕ್ರಮವಾಗಿ ರೈಲಿನಲ್ಲಿ ಮರಳು ಸಾಗಾಟ ಮಾಡುವುದನ್ನು ಬುಧವಾರ ಬಿ.ಸಿ.ರೋಡ್ ರೈಲು ನಿಲ್ದಾಣದಲ್ಲಿ ಪತ್ತೆ ಹಚ್ಚಿದ ಬಂಟ್ವಾಳ ವೃತ್ತ ನಿರೀಕ್ಷಕ ಬೆಳ್ಳಿಯಪ್ಪ ನೇತೃತ್ವದ ಪೊಲೀಸರ ತಂಡ ಪ್ರಕರಣವನ್ನು ರೈಲ್ವೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಗೂಡ್ಸ್ ರೈಲೊಂದರ 6 ಬೋಗಿಗಳಲ್ಲಿ ಅಂದಾಜು 8 ಲಕ್ಷ ರೂ. ಮೌಲ್ಯದ 24 ಲಾರಿ ಮರಳನ್ನು ಸಾಗಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿಯಂತೆ ದಾಳಿ ನಡೆಸಿ ಪರಿಶೀಲಿಸಿದಾಗ ಅಕ್ರಮ ಸಾಗಾಟ ಎಂಬುದಾಗಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದ.ಕ. ಜಿಲ್ಲೆಯಲ್ಲಿ ಇನ್ನೂ ಮರಳು ಮಾರಾಟ ಹಾಗೂ ಸಾಗಾಟ ಟೆಂಡರ್ ಪ್ರಕ್ರಿಯೆಯಲ್ಲಿದ್ದು ಹೊರಜಿಲ್ಲೆಗಳಿಗೆ ಮರಳು ಸಾಗಾಟವನ್ನು ನಿಷೇಧಿಸಲಾಗಿದೆ. ಆದರೆ ರೈಲುಗಳ ಮೂಲಕ ಹೊರಜಿಲ್ಲೆಗಳಿಗೆ ಅಕ್ರಮ ಸಾಗಾಟ ಮಾಡುತ್ತಿರುವುದು ಅಚ್ಚರಿ ಮೂಡಿಸಿದೆ. ಇದರ ಹಿಂದೆ ದೊಡ್ಡ ಜಾಲವೇ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News