ಸಂಟ್ಯಾರ್: ಓಮ್ನಿ -ಬಸ್ಸು ಡಿಕ್ಕಿ ಇಬ್ಬರು ಗಂಭೀರ

Update: 2016-04-16 13:30 GMT

ಮಾಣಿ- ಮೈಸೂರು ಹೆದ್ದಾರಿಯ ಸಂಟ್ಯಾರ್ ಶಾಲಾ ಕ್ರಾಸ್ ಬಳಿ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಓಮ್ನಿ ಕಾರು ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಶನಿವಾರ ಮುಂಜಾನೆ ನಡೆದಿದೆ.

ಸುಳ್ಯದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಓಮ್ನಿ ಮತ್ತು ಮುಂಭಾಗದಿಂದ ಬಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ಸು ಪರಸ್ಪರ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನ ಚಾಲಕ ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮ ಬಾಲುಗುರಿ ನಿವಾಸಿ ಮಾಯಿಲಪ್ಪ ಎಂಬವರ ಪುತ್ರ ಮಾಧವ ಹಾಗೂ ಇನ್ನೋರ್ವರಿಗೆ ಗಂಭೀರ ಗಾಯಗಳಾಗಿದೆ. ಅಪಘಾತದ ಬಳಿಕ ಕಾರಿನಲ್ಲಿ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಸ್ಥಳೀಯರು ಹೊರಗೆ ತೆಗೆದು ಪ್ರಾಣ ರಕ್ಷಣೆ ಮಾಡಿದಾರೆ. ಘಟನೆಯ ಕುರಿತು ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ ವಲಯ: ಇದೇ ಸ್ಥಳದಲ್ಲಿ ಹತ್ತಕ್ಕೂ ಮಿಕ್ಕಿ ಅಪಘಾತಗಳು ನಡೆದಿದೆ. ಕೆಲ ದಿನಗಳ ಹಿಂದೆ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದ, ಅಪಾಯಕಾರಿ ತಿರುವಿನಿಂದ ಕೂಡಿದ ಈ ಸ್ಥಳದಲ್ಲಿ ಎದುರಿನಿಂದ ಬರುವ ವಾಹನಗಳು ಗೋಚರಿಸದೇ ಇರುವುದು ಅಪಘಾತಕ್ಕೆ ಕಾರಣವಾಗುತ್ತಿದೆ. ರಸ್ತೆ ಅಗಲೀಕರಣದ ವೇಳೆಯೂ ಇಲ್ಲಿನ ತಿರುವು ಹಾಗೇ ಉಳಿದುಕೊಂಡಿದೆ. ಅಪಘಾತ ತಪ್ಪಿಸಲು ಶಾಲಾ ಮುಂಭಾಗದಲ್ಲಿ ಹಂಪ್ ಹಾಕಲಾಗಿತ್ತು ಸಾರ್ವಜನಿಕರ ಆಕ್ಷೇಪದ ಬಳಿಕ ಅದನ್ನು ತೆರವು ಮಾಡಲಾಗಿತ್ತು. ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News