ಅಕ್ರಮ ಮರಳುಗಾರಿಕೆ ತಡೆಗೆ ಆಗ್ರಹ: ತಹಶೀಲ್ದಾರ್ ಕಚೇರಿಗೆ ಬಿಜೆಪಿ ಮುತ್ತಿಗೆ

Update: 2016-04-18 06:28 GMT

ಬಂಟ್ವಾಳ, ಎ.18: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಕ್ರಮ ಮರಳು ಸಾಗಾಟವನ್ನು ವಿರೋಧಿಸಿ ಬಿಜೆಪಿ ಬಂಟ್ವಾಳ ತಾಲೂಕು ಕ್ಷೇತ್ರ ಸಮಿತಿಯ ವತಿಯಿಂದ ಬಿ.ಸಿ.ರೋಡ್‌ನಲ್ಲಿರುವ ತಹಶೀಲ್ದಾರ್ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಲಾಯಿತು. ಜಿಲ್ಲೆಯ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ವ್ಯಾಪಕ ಮರಳುಗಾರಿಕೆ ನಡೆಯುತ್ತಿದ್ದು, ದಂಧೆಕೋರರಿಗೆ ಅಕ್ರಮವಾಗಿ ಮರಳು ಸಾಗಾಟಕ್ಕೆ ಅಧಿಕಾರಿಗಳೇ ಕೃಪೆ ತೋರುತ್ತಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದರು. ಜಿಲ್ಲೆಯಲ್ಲಿ ರಾತ್ರಿ ಹೊತ್ತು ಲಾರಿಗಳಲ್ಲಿ ಅಕ್ರಮ ಮರಳು ಸಾಗಟ ಮಾಡುತ್ತಿದ್ದವರು ಇತ್ತೀಚಿನ ದಿನಗಳಲ್ಲಿ ರೈಲು ವ್ಯಾಗನ್‌ನಲ್ಲಿ ಸಾಗಾಟ ಮಾಡಲು ಶುರುಮಾಡಿದ್ದಾರೆ. ಇತ್ತೀಚೆಗೆ ಬಿ.ಸಿ.ರೋಡ್‌ನ ರೈಲು ನಿಲ್ದಾಣದಲ್ಲಿ ಹಗಲು ಹೊತ್ತಿನಲ್ಲೇ ರೈಲು ವ್ಯಾಗನ್‌ನಲ್ಲಿ ಅಕ್ರಮ ಮರಳು ಪತ್ತೆಯಾಗಿರುವುದು ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ತೀವ್ರತೆಗೆ ಸಾಕ್ಷಿಯಾಗಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News