ಎ.23: ಟ್ಯಾಲೆಂಟ್‌ನಿಂದ ಮಾಹಿತಿ ಕಾರ್ಯಾಗಾರ

Update: 2016-04-20 18:49 GMT

ಮಂಗಳೂರು, ಎ.20: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ವತಿಯಿಂದ ಪಶು ಸಂಗೋಪನೆ ಇಲಾಖೆಯಿಂದ ಲಭ್ಯವಿರುವ ವಿವಿಧ ಸವಲತ್ತುಗಳು ಮತ್ತು ಯೋಜನೆಗಳ ಬಗ್ಗೆ ತರಬೇತಿ ಕಾರ್ಯಾಗಾರವು ಎ.23ರಂದು ಬೆಳಗ್ಗೆ 10 ಗಂಟೆಗೆ ಕಂಕನಾಡಿಯಲ್ಲಿರುವ ಟ್ಯಾಲೆಂಟ್ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಾಗಾರದಲ್ಲಿ ಪಶು ಸಂಗೋಪನೆ ಇಲಾಖೆಯಿಂದ ಹೈನುಗಾರಿಕೆ, ದನ, ಆಡು ಮತ್ತು ಕೋಳಿ ಸಾಕಾಣಿಕೆಗೆ ಸಿಗುವ ಸವಲತ್ತುಗಳು ಮತ್ತು ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುವುದು. ಅಲ್ಲದೆ ಸದರಿ ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯುವ ಬಗ್ಗೆ ಸೂಕ್ತ ತರಬೇತಿಯನ್ನು ಸಂಬಂಧಿತ ಇಲಾಖೆಯ ತಜ್ಞ ಸಂಪನ್ಮೂಲ ವ್ಯಕ್ತಿಯಿಂದ ನೀಡಲಾಗುವುದು. ಕಾರ್ಯಾಗಾರದಲ್ಲಿ ಭಾಗವಹಿಸಲು ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸುವಂತೆ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಿ ಅಬ್ದುಲ್ ಹಮೀದ್ ಕಣ್ಣೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ನೋಂದಣಿ ಮತ್ತು ಮಾಹಿತಿಗಾಗಿ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್, ವಿಶ್ವಾಸ್ ಕ್ರೌನ್, ಕಂಕನಾಡಿ ಮಂಗಳೂರು-2, ದೂರವಾಣಿ: 0824-4267883, 9972283365, 9743715388ನ್ನು ಸಂಪರ್ಕಿಸಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News