ಸರಕಾರದ ವತಿಯಿಂದ ನಾರಾಯಣ ಗುರು ಜನ್ಮದಿನಾಚರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

Update: 2016-04-21 10:48 GMT

ಬಂಟ್ವಾಳ: ಮುಂದಿನ ವರ್ಷದದಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ ಜನ್ಮ ದನಾಚರಣೆಯನ್ನು ಸರಕಾರದ ವತಿಯಿಂದಲೇ ಆಚರಿಸಲಾಗುವುದು ಎಂದು ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ಗುರುವಾರ ಬಂಟ್ವಾಳ ತಾಲೂಕಿನ ಸಜಿಪ ಮೂಡಾ ಗ್ರಾಮದ ಸುಭಾಷ್‌ನಗರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವತಿಯಿಂದ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಬ್ರಹ್ಮಶ್ರೀ ನಾರಾಯಣ ಗುರು ಜ್ಞಾನ ಮಂದಿರವನ್ನು ಲೋಕಾರ್ಪಣೆಗೈದು ಬಳಿಕ ನಡೆದ ಸಭಾಕಾರ್ಯಕ್ರಮಲ್ಲಿ ಅವರು ಮಾತನಾಡುತ್ತಿದ್ದರು.

ನಾರಾಯಣ ಗುರುಗಳ ಬಗ್ಗೆ ಅಪಾರವಾದ ಗೌರವವನ್ನು ಹೊಂದಿರುವ ತಾನು ಜನರಲ್ಲಿ ಧಾರ್ಮಿಕ ಜಾಗೃತಿಯನ್ನುಂಟುಮಾಡುವ ಮೂಲಕ ಸಮಾಜದಲ್ಲಿ ಸುಧಾರಣೆ ತರಳು ಪ್ರಯತ್ನಿಸಿದವರಾಗಿದ್ದು ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯಲು ಪ್ರಮಾಣಿಕ ಪ್ರಯತ್ನ ಮಾಡಿದಾಗ ಜ್ಞಾನ ಮಂದಿರದ ನಿರ್ಮಾಣ ಸಾರ್ಥಕವೆನಿಸುವುದು ಎಂದು ಅವರು ಹೇಳಿದರು.

ಜಾತಿವ್ಯವಸ್ಥೆ ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯವರೆಗೆ ಮೀಸಲಾತಿಯ ಅಗತ್ಯವಿದೆ. ಇದನ್ನೇ ಡಾ. ಬಿ.ಆರ್.ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದರು. ಜಾತಿ ಜಾತಿಯ ನಡುವೆ ಆರ್ಥಿಕ, ಸಮಾಜಿಕ ಸಮಾನತೆ ಬಂದಾಗ ಮಾತ್ರ ಜಾತಿ ವ್ಯವಸ್ಥೆಯನ್ನೇ ಹೋಗಲಾಡಿಸಲು ಸಾಧ್ಯ ಎಂದ ಅವರು, ಎಲ್ಲ ಜಾತಿಯ ಬಡವರಿಗೆ ವಿಶೇಷವಾದ ಸವಲತ್ತು ಮತ್ತು ಸೌಲಭ್ಯಗಳನ್ನು ಒದಗಿಸಿದಾಗ ಅವರು ಕೂಡಾ ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯ. ಇದಕ್ಕೆ ಕಾಂಗ್ರೆಸ್ ಸರಕಾವು ಬದ್ಧವಾಗಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News