ಫರಂಗಿಪೇಟೆ: ಆಟೋ ಢಿಕ್ಕಿ ಹೊಡೆದು ವ್ಯಕ್ತಿಗೆ ಗಾಯ

Update: 2016-04-22 16:26 GMT

ಫರಂಗಿಪೇಟೆ: ಆಟೋ ರಿಕ್ಷವೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ತಾಲೂಕಿನ ಫರಂಗಿಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ. 

ಅಪ್ಸಾಲಿ ಅಮೆಮಾರ್ ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಫರಂಗಿಪೇಟೆ ಜಂಕ್ಷನ್ ನಲ್ಲಿ ರಸ್ತೆ ದಾಟುತಿದ್ದ ವೇಳೆ ಬಿ.ಸಿ.ರೋಡ್ ಕಡೆಯಿಂದ ಬರುತ್ತಿದ್ದ ಆಟೊ ರಿಕ್ಷ ಢಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. 

ಘಟನೆಯಿಂದ ಅಪ್ಸಾಲಿಯವರ ತಲೆ ಭಾಗಕ್ಕೆ ತೀವ್ರ ಸ್ವರೂಪದ ಗಾಯವಾಗಿದ್ದು, ಸಾರ್ವಜನಿಕರು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News