ಮುಂದಿನ ವರ್ಷ 6 ಲಕ್ಷ ಮನೆ ನಿರ್ಮಾಣ: ಅಂಬರೀಷ್

Update: 2016-04-24 18:47 GMT

ಬೆಳ್ತಂಗಡಿ, ಎ.24: ಸರಕಾರದ ವಿವಿಧ ಯೋಜನೆ ಗಳಿಗೆ ಸಂಬಂಧಿಸಿ ಮುಂದಿನ ವರ್ಷ 6 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಲಾ ಗಿದೆ ಎಂದು ವಸತಿ ಸಚಿವ ಅಂಬರೀಷ್‌ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ರವಿವಾರ ಧರ್ಮಸ್ಥಳಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ರಾಜ್ಯದ ಎಲ್ಲ ಜಿಲ್ಲೆಗಳಿಗೂ ಆದ್ಯತೆ ನೀಡಿ ಮನೆಗಳ ಹಂಚಿಕೆ ಮಾಡಲಾಗುವುದು. ಈ ವರ್ಷ 3 ಲಕ್ಷ ಮನೆಗಳ ನಿರ್ಮಾಣದ ಗುರಿಯನ್ನು ಹೊಂದಿದ್ದು, ಚುನಾವಣೆಯ ಹಿನ್ನೆಲೆಯಲ್ಲಿ ಇದು ಸ್ಪಲ್ಪವಿಳಂಬವಾಗಿದೆ. ಆದರೂ ಎಪ್ರಿಲ್ ಒಳಗೆ ಪೂರ್ಣಗೊಳಿಸಲಾಗುತ್ತಿದೆ. ಅಲ್ಲದೆ, ಪರಿಶಿಷ್ಟ ಜಾತಿ/ಪಂಗಡದವರಿಗೆ ಅಂಬೇಡ್ಕರ್ ವಸತಿ ಯೋಜನೆಯಲ್ಲಿ 1.70 ಲಕ್ಷ ಮನೆ ನಿರ್ಮಾಣದ ಯೋಜನೆಯನ್ನು ಹಮ್ಮಿಕೊಳ್ಳಲಾಗುವುದು. ದೇವರಾಜ ಅರಸು ಯೋಜನೆಯಡಿ ವಿಕಲ ಚೇತನರಿಗೆ ವಿಶೇಷ ಯೋಜನೆಯನ್ನು ಮನೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News