ಸಿಇಟಿ: ದ.ಕ. ಜಿಲ್ಲೆಯಲ್ಲಿ 12352 ವಿದ್ಯಾರ್ಥಿಗಳು

Update: 2016-04-26 12:34 GMT

ಮಂಗಳೂರು,ಎ.26: ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆ ಮೇ 4 ಮತ್ತು 5ರಂದು ನಡೆಯಲಿದ್ದು, ಜಿಲ್ಲೆಯಲ್ಲಿ 12352 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿದ್ದಾರೆ ಎಂದು ಜಿಲ್ಲಾಕಾರಿ ಎ.ಬಿ. ಇಬ್ರಾಹಿಂ ತಿಳಿಸಿದ್ದಾರೆ.

ಅವರು ಈ ಸಂಬಂಧ ತಮ್ಮ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 22 ಸಿಇಟಿ ಪರೀಕ್ಷಾ ಕೇಂದ್ರಗಳಿವೆ. ಮಂಗಳೂರು ನಗರದಲ್ಲಿ 11, ಮೂಡಬಿದ್ರೆ 6, ಪುತ್ತೂರು 3 ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿ 2 ಪರೀಕ್ಷಾ ಕೇಂದ್ರಗಳಿವೆ. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳನ್ನು ಸುರಕ್ಷತೆಯಲ್ಲಿ ತಲುಪಿಸಲಾಗುವುದು ಎಂದು ಅವರು ಹೇಳಿದರು.

ಪರೀಕ್ಷಾ ಕೊಠಡಿಗಳ ಮೇಲ್ವಿಚಾರಕರನ್ನು ಲಾಟರಿ ಮೂಲಕ ಆಯ್ಕೆ ಮಾಡಬೇಕು. ಯವುದೇ ಕಾರಣಕ್ಕೂ ವಿಜ್ಞಾನ ಸಂಬಂತ ವಿಷಯಗಳ ಉಪನ್ಯಾಸಕರನ್ನು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸದಂತೆ ಸೂಚಿಸಿದ ಅವರು, ಸಿಇಟಿ ಪರೀಕ್ಷೆಯ ಕರ್ತವ್ಯದಲ್ಲಿರುವ ಉಪನ್ಯಾಸಕರ ಮಕ್ಕಳು, ಸಂಬಂಕರು ಸಿಇಟಿ ಪರೀಕ್ಷೆ ಬರೆಯುತ್ತಿದ್ದರೆ ಅಂತಹವರನ್ನೂ ಕರ್ತವ್ಯಕ್ಕೆ ನಿಯೋಜಿಸದಂತೆ ಸೂಚಿಸಿದರು.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಮೊಬೈಲ್, ಕ್ಯಾಲ್ಕುಲೇಟರ್ ಮತ್ತು ಡಿಜಿಟಲ್ ವಾಚ್ ಧರಿಸಿ ಬರುವಂತಿಲ್ಲ. ಅಲ್ಲದೇ, ಹಾಲ್ ಟಿಕೇಟ್‌ನೊಂದಿಗೆ ತಮ್ಮ ಐಟಿ ಕಾರ್ಡ್ ತರುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಕಾರಿ ಎ.ಬಿ. ಇಬ್ರಾಹಿಂ ತಿಳಿಸಿದರು.

ಅಪರ ಜಿಲ್ಲಾಕಾರಿ ಕುಮಾರ್ ಮಾತನಾಡಿ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲಾಗುವುದು. ಅಲ್ಲದೇ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಸಿಇಟಿ ಪರೀಕ್ಷೆ ಮೇಲುಸ್ತುವಾರಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಎಎಸ್‌ಪಿ ವಿನ್ಸಂಟ್ ಶಾಂತಕುಮಾರ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಮ್ಮಯ್ಯ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News