ಪುತ್ತೂರು: ಅಂಬೇಡ್ಕರ್ ಜನ್ಮ ದಿನಾಚರಣೆ

Update: 2016-04-26 18:37 GMT

ಪುತ್ತೂರು, ಎ.26: ಭಾರತದ ಸಂವಿಧಾನದ ರಚನೆಯಲ್ಲಿ ಗಣನೀಯ ಕೊಡುಗೆ ನೀಡಿದ ಅಂಬೇಡ್ಕರ್ ಸಂವಿಧಾನ ಶಿಲ್ಪಿ. ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಅಗ್ರಗಣ್ಯ ನಾಯಕರಲ್ಲಿ ಅವರ ಹೆಸರು ಚಿರಸ್ಥಾಯಿಯಾಗಿ ಉಳಿದಿದೆ ಎಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಕೆ.ಸೀತಾರಾಮ ಕೇವಳ ಹೇಳಿದರು.
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇಲ್ಲಿನ ತಾಪಂ ಸಭಾಂಗಣದಲ್ಲಿ ನಡೆದ ಭಾರತ ರತ್ನ ಸಂವಿಧಾನ ಶಿಲ್ಪಿಡಾ.ಬಿ.ಆರ್. ಅಂಬೇಡ್ಕರ್
ರ 125ನೆ ಜನ್ಮ ದಿನಾಚರಣಾ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. ಶಾಸಕಿ ಶಕುಂತಳಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೆಟ್ಟ ಪಿ.ಈಶ್ವರ ಭಟ್,ಶರತ್, ಅನ್ನಪೂರ್ಣೇಶ್ವರಿ, ಶಾಂತಿ ಹೆಗ್ಡೆ, ಕಂದಾಯ ಇಲಾಖೆಯ ನಾಗೇಶ್, ಹರೀಶ್, ಉಪಸ್ಥಿತರಿದ್ದರು. ಉಪ ತಹಶೀಲ್ದಾರ್ ಶ್ರೀಧರ್ ಕೆ. ನಾಡಗೀತೆ ಹಾಡಿದರು. ಕೊಂಬೆಟ್ಟು ನಿಲಯ ಮೇಲ್ವಿಚಾರಕ ಕೃಷ್ಣ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಜಿ.ಎಸ್. ವಂದಿಸಿದರು. ಚಿದಾನಂದ ಕಾಮತ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News