ತಾಪಂ ಅಧ್ಯಕ್ಷ/ಉಪಾಧ್ಯಕ್ಷರ ಆಯ್ಕೆಗೆ ದಿನಾಂಕ ನಿಗದಿ

Update: 2016-04-26 18:40 GMT

ಉಡುಪಿ, ಎ.26: ಜಿಲ್ಲೆಯ ಕುಂದಾಪುರ, ಉಡುಪಿ ಹಾಗೂ ಕಾರ್ಕಳ ತಾಲೂಕು ಪಂಚಾಯತ್‌ಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಉಡುಪಿ ತಾಪಂ ಅಧ್ಯಕ್ಷ/ಉಪಾಧ್ಯಕ್ಷರ ಆಯ್ಕೆ ಮೇ 6ರಂದು ಪೂರ್ವಾಹ್ನ 11 ಗಂಟೆಗೆ, ಕುಂದಾಪುರ ತಾಪಂ ಅಧ್ಯಕ್ಷ/ಉಪಾಧ್ಯಕ್ಷರ ಆಯ್ಕೆ ಮೇ 7ರಂದು ಪೂರ್ವಾಹ್ನ 11ಕ್ಕೆ ಹಾಗೂ ಕಾರ್ಕಳ ತಾಪಂ ಅಧ್ಯಕ್ಷ/ಉಪಾಧ್ಯಕ್ಷರ ಆಯ್ಕೆ ಮೇ 10ರಂದು ಪೂರ್ವಾಹ್ನ 11ಕ್ಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News