ಪತ್ರಕರ್ತ ಚಂದ್ರಹಾಸರಿಗೆ ಪ.ಗೋ. ಪ್ರಶಸ್ತಿ ಪ್ರದಾನ

Update: 2016-04-27 00:18 IST
ಪತ್ರಕರ್ತ ಚಂದ್ರಹಾಸರಿಗೆ ಪ.ಗೋ. ಪ್ರಶಸ್ತಿ ಪ್ರದಾನ
  • whatsapp icon

ಮಂಗಳೂರು, ಎ.26: ದ.ಕ. ಜಿಲ್ಲಾ ಕಾರ್ಯನಿರತ ಪತ ಕರ್ತರ ಸಂಘದ ವತಿಯಿಂದ ನೀಡಲಾಗುವ 2015ನೆ ಸಾಲಿನ ಪದ್ಯಾಣ ಗೋಪಾಲಕೃಷ್ಣ (ಪ.ಗೋ.) ಪ್ರಶಸ್ತಿಯನ್ನು ‘ನಿರಂತರ ಪ್ರಗತಿ’ ಪತ್ರಿಕೆಯ ಉಪಸಂಪಾದಕ ಚಂದ್ರಹಾಸ ಚಾರ್ಮಾಡಿಗೆ ಇಂದು ನಗರದ ಪ್ರೆಸ್‌ಕ್ಲಬ್‌ನಲ್ಲಿ ಪ್ರದಾನ ಮಾಡಲಾಯಿತು. ದ.ಕ.ಜಿಲ್ಲಾ ಎಸ್ಪಿ ಡಾ. ಶರಣಪ್ಪ ಎಸ್.ಡಿ. ಪ್ರಶಸ್ತಿ ಪ್ರದಾನ ಮಾಡಿದರು. ಮುಖ್ಯ ಅತಿಥಿಯಾಗಿ ಮನೋಹರ್ ಪ್ರಸಾದ್ ಮಾತನಾಡಿದರು.
ಪ್ರಶಸ್ತಿ ಸ್ವೀಕರಿಸಿದ ಚಂದ್ರಹಾಸ ಚಾರ್ಮಾಡಿ ಮಾತನಾಡಿ, ಪ್ರಶಸ್ತಿ ನೀಡಿ ಬೆನ್ನು ತಟ್ಟಿದಾಗ ನಮ್ಮ ಜವಾಬ್ದಾರಿ ಹೆಚ್ಚುತ್ತದೆ. ಜೊತೆಗೆ ಇನ್ನಷ್ಟು ಉತ್ತಮ ಕೆಲಸಗಳಿಗೆ ಪ್ರೇರಣೆಯಾಗುತ್ತದೆ ಎಂದು ಅಭಿಪ್ರಾಯಿಸಿದರು. ಬೆಂಗಳೂರಿಗೆ ವರ್ಗಾವಣೆಗೊಂಡಿರುವ ಹಿರಿಯ ಪತ್ರಕರ್ತ ಸುರೇಶ ಬೆಳಗಜೆೆಯವರಿಗೆ ಬೀಳ್ಕೊಡುವ ಸಮಾರಂಭ ಹಾಗೂ ಮೈಸೂರಿನಲ್ಲಿ ನಡೆದ ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಯಲಿ ್ಲ ಚಾಂಪಿಯನ್‌ಶಿಪ್ ಪಡೆದಿರುವ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತಂಡಕ್ಕೆ ಅಭಿನಂದನಾ ಸಮಾರಂಭ ಈ ಸಂದರ್ಭ ನಡೆಯಿತು. ವೇದಿಕೆಯಲ್ಲಿ ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು. ಸಂಘದ ಮಾಜಿ ಅಧ್ಯಕ್ಷ ಹರಿಪ್ರಸಾದ್ ರೈ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಇಂದಾಜೆ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News