ಕೊಂಬೆಟ್ಟುವಿನಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ

Update: 2016-05-01 17:08 GMT

ಪುತ್ತೂರು, ಮೇ 1: ಪುತ್ತೂರಿನ ಮರಾಠಿ ಸಮಾಜ ಸೇವಾ ಸಂಘದ ವತಿಯಿಂದ 3ನೆ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ರವಿವಾರ ಕೊಂಬೆಟ್ಟು ಮರಾಠಿ ಸಮಾಜ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮರಾಠಿ ಸಮಾಜಕ್ಕೆ ಸೇರಿದ 6 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ವಿವಾಹ ಸಮಾರಂಭದ ಧಾರ್ಮಿಕ ವಿಧಿ ವಿಧಾನಗಳನ್ನು ವೇ.ಮೂ. ಸುಬ್ರಹ್ಮಣ್ಯ ಭಟ್ ನೆರವೇರಿಸಿದರು. ಮರಾಠಿ ಸೇವಾ ಸಂಘದ ಅಧ್ಯಕ್ಷ ಶೇಷಪ್ಪ ನಾಯ್ಕ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮರಾಠಿ ಮಹಿಳಾ ವೇದಿಕೆ ಮತ್ತು ಮರಾಠಿ ಯುವ ವೇದಿಕೆಯು ಕಾರ್ಯಕ್ರಮಕ್ಕೆ ಸಹಕಾರ ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News