ಮೇ13ರಂದು ಮಂಗಳೂರು ವಿವಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

Update: 2016-05-10 17:38 GMT

ಕೊಣಾಜೆ, ಮೇ 10: ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದ ಆಶ್ರಯದಲ್ಲಿ ‘ಭಾರತದಲ್ಲಿ ಸಮಾಜಶಾಸ್ತ್ರ ಮತ್ತು ಸ್ಥಳೀಯ ಸಂಶೋಧನೆಯ ಬೆಳವಣಿಗೆ’ ಎಂಬ ವಿಷಯದಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವು ಮೇ 13ರಂದು ಮಂಗಳೂರು ವಿವಿಯ ಎಂಬಿಎ ಸಭಾಂಗಣದಲ್ಲಿ ನಡೆಯಲಿದೆ.

ಸಮಾರಂಭದ ಉದ್ಘಾಟನೆಯನ್ನು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜೋಗನ್‌ಶಂಕರ್ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮೈಸೂರು ವಿವಿಯ ವಿಶ್ರಾಂತ ಪ್ರಾಧ್ಯಾಪಕಿ ಪ್ರೊ.ಇಂದಿರಾ ಹಾಗೂ ತಿರುವನಂತಪುರದ ಕೇರಳ ವಿಶ್ವವಿದ್ಯಾನಿಲಯದ ಪ್ರೊ.ಜಾಕಬ್ ಜಾನ್ ಭಾಗವಹಿಸಲಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಕೆ.ಭೈರಪ್ಪವಹಿಸಲಿದ್ದಾರೆ ಎಂದು ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವಿನಯ ರಜತ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News