ಮೇ 13ರಂದು ಮಳೆಗಾಗಿ ಸರ್ವಧರ್ಮ ಪ್ರಾರ್ಥನೆ

Update: 2016-05-10 18:53 GMT

ಉಡುಪಿ, ಮೇ 10: ನೀರಿನ ಕೊರತೆಯ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ನೇತೃತ್ವದಲ್ಲಿ ಮೇ 13ರಂದು ಮಳೆ ಬರುವಂತೆ ಮಸೀದಿ, ದೇವಾಲಯ ಮತ್ತು ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಲಾಗಿದೆ.
ಸಂಜೆ 4:30ಕ್ಕೆ ಉಡುಪಿಯ ಜಾಮಿಯಾ ಮಸೀದಿಯಲ್ಲಿ, 5ಗಂಟೆಗೆ ಅನಂತೇಶ್ವರ, ಚಂದ್ರಮೌಳೇಶ್ವರ ದೇವಸ್ಥಾನಗಳಲ್ಲಿ ಮತ್ತು 5:50ಕ್ಕೆ ಶೋಕಾ ಮಾತಾ ಚರ್ಚ್‌ನಲ್ಲಿ ಮಳೆಗಾಗಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಇದರಲ್ಲಿ ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್, ಜನಪ್ರತಿನಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News