ರಾಜೀವ್‌ ಗಾಂಧಿ ಮಾನವ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2016-05-10 18:54 GMT

ಮಂಗಳೂರು, ಮೇ 10: ಭಾರತ ಸರಕಾರದ ವತಿಯಿಂದ ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 10 ವರ್ಷಕ್ಕಿಂತ ಹೆಚ್ಚಿನ ಸೇವೆಯನ್ನು ಸಲ್ಲಿಸಿರುವಂತಹ ವ್ಯಕ್ತಿಗಳನ್ನು ಗುರುತಿಸಿ ರಾಜೀವ್‌ಗಾಂ ಮಾನವ ಸೇವಾ ಪ್ರಶಸ್ತಿಯನ್ನು 3 ವ್ಯಕ್ತಿಗಳಿಗೆ ನೀಡಿ ಗೌರವಿಸಲಾಗುವುದು. ಪ್ರತಿ ವ್ಯಕ್ತಿಗೆ ನೀಡುವ ಪ್ರಶಸ್ತಿಯು 1 ಲಕ್ಷ ರೂ. ನಗದು ಬಹುಮಾನ, ಬೆಳ್ಳಿ ಲಕ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಈ ಪ್ರಶಸ್ತಿಗಾಗಿ ಆಯ್ಕೆ ಮಾಡುವ ವ್ಯಕ್ತಿಗಳು ಮಕ್ಕಳ ಶ್ರೇಯೋಭಿವೃದ್ಧಿಗಾಗಿ 10 ವರ್ಷಗಳಿಗೂ ಮೇಲ್ಪಟ್ಟು ಕಾರ್ಯವನ್ನು ನಿರ್ವಹಿಸಿರಬೇಕು. ಸಂಘ-ಸಂಸ್ಥೆಗಳಲ್ಲಿ ವೇತನ ಪಡೆಯುವ ವ್ಯಕ್ತಿಗಳು ಈ ಪ್ರಶಸ್ತಿಗೆ ಅರ್ಹರಿರುವುದಿಲ್ಲ. ಈ ಪ್ರಶಸ್ತಿಗೆ ಆಯ್ಕೆ ಆಗುವ ಇರುವ ಒಂದೇ ಮಾನದಂಡ-ಮಕ್ಕಳ ಕಲ್ಯಾಣಕ್ಷೇತ್ರದಲ್ಲಿ ವ್ಯಕ್ತಿಗಳು ಮಾಡಿರುವ ಕೆಲಸದ ಗುಣಮಟ್ಟದ ಮೇಲೆ ಅವಲಂಬಿತವಾಗಿದೆ.

 
ಅದೇ ರೀತಿಯಲ್ಲಿ ಮಕ್ಕಳ ಕಲ್ಯಾಣಕ್ಷೇತ್ರದಲ್ಲಿ ಹಲವು ವರ್ಷಗಳ ಅಸಾಧಾರಣ ಸೇವೆ ಸಲ್ಲಿಸಿದ 3 ವ್ಯಕ್ತಿಗಳು ಹಾಗೂ 5 ಸಂಸ್ಥೆಗಳ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡುವ ಯೋಜನೆಯನ್ನು ಕೇಂದ್ರ ಸರಕಾರವು ಜಾರಿಗೆ ತಂದಿರುತ್ತದೆ. ಪ್ರತಿ ವ್ಯಕ್ತಿಗೆ ನೀಡುವ ಪ್ರಶಸ್ತಿಯು 1 ಲಕ್ಷ ರೂ. ಹಾಗೂ ಪ್ರಶಸ್ತಿ ಪತ್ರ ಮತ್ತು ಪ್ರತಿ ಸಂಸ್ಥೆಗೆ ನೀಡುವ ಪ್ರಶಸ್ತಿಯು 3 ಲಕ್ಷ ರೂ. ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಸಂಘ ಸಂಸ್ಥೆಗಳಲ್ಲಿ ವೇತನ ಪಡೆಯುವ ವ್ಯಕ್ತಿಗಳು ಈ ಪ್ರಶಸ್ತಿಗೆ ಅರ್ಹರಿರುವುದಿಲ್ಲ. ಈ ಪ್ರಶಸ್ತಿಗೆ ಆಯ್ಕೆ ಮಾಡಲು ಇರುವ ಒಂದೇ ಮಾನದಂಡ-ಮಕ್ಕಳ ಕಲ್ಯಾಣಕ್ಷೇತ್ರದಲ್ಲಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಮಾಡಿರುವ ಕೆಲಸದ ಗುಣಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ. ರಾಜ್ಯ ಸರಕಾರದಿಂದ ರಚಿಸಲ್ಪಟ್ಟಿರುವ ಸಮಿತಿಯು ಪ್ರಶಸ್ತಿಗಳಿಗೆ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗಳು ಹಾಗೂ ಸಂಸ್ಥೆಗಳನ್ನು ಆಯ್ಕೆ ಮಾಡಿ ಕೇಂದ್ರ ಸರಕಾರಕ್ಕೆ ಶಿಾರಸು ಮಾಡುತ್ತದೆ.ನೆ ಸಾಲಿಗೆ ರಾಜೀವ್‌ಗಾಂ ಮಾನವಸೇವಾ ಪ್ರಶಸ್ತಿಗಾಗಿ ಹಾಗೂ ಮಕ್ಕಳ ಕಲ್ಯಾಣಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಗಾಗಿ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಜಿಲ್ಲಾ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರು. ಇವರ ಕಚೇರಿಯಿಂದ ಪಡೆದು, ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿ ಜಿಲ್ಲಾ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರು ಇವರಿಗೆ ಮೇ 25ರೊಳಗಾಗಿ ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉರ್ವಾಸ್ಟೋರ್, ಅಶೋಕ ನಗರ ಅಂಚೆ ಮಂಗಳೂರು-575006 ದೂರವಾಣಿ: 0824-2451254, 2453071ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News