ಬೆಳ್ತಂಗಡಿ: ಓಮ್ನಿ ಪಲ್ಟಿಯಾಗಿ ಮೂವರಿಗೆ ಗಾಯ

Update: 2016-05-11 13:01 GMT

ಬೆಳ್ತಂಗಡಿ, ಮೇ 11: ಗುರಿಪಳ್ಳ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿಯಾಗಿದ್ದು ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ.

 ವೇಗವಾಗಿ ಬಂದ ಕಾರು ರಸ್ತೆಯಿಂದ ಮಣ್ಣಿನ ರಸ್ತೆಗೆ ಇಳಿದು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

ಕಾರಿನಲ್ಲಿದ್ದ ಪ್ರಯಾಣಿಕರ ಪೈಕಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಇತರರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News