ತೆಲಂಗಾಣದಲ್ಲಿ ರಿಕ್ಷಾ-ಟ್ರಕ್‌ ಡಿಕ್ಕಿ ; 15 ಸಾವು

Update: 2016-05-15 05:13 GMT

ಹೈದರಾಬಾದ್‌, ಮೇ 15: ಅಟೋ ರಿಕ್ಷಾ ಮತ್ತು ಟ್ರಕ್‌ ಡಿಕ್ಕಿ ಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 15 ಮಂದಿ ಮೃತಪಟ್ಟ ಘಟನೆ ತೆಲಂಗಾಣದ ಅದಿಲಾಬಾದ್‌ ಜಿಲ್ಲೆಯ ಭಾನಿಸಾ ಪಟ್ಟಣದಲ್ಲಿ ಶನಿವಾರ ರಾತ್ರಿ ಸಂಭಿಸಿದೆ.
ಮೃತಪಟ್ಟವರಲ್ಲಿ 5 ಮಹಿಳೆಯರು ಮತ್ತು 7 ಮಕ್ಕಳು ಸೇರಿದ್ದಾರೆ. ಇವರೆಲ್ಲರೂ ಮಹಾರಾಷ್ಟ್ರದವರು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ದೇವಸ್ಥಾನವೊಂದಕ್ಕೆ ಅಟೋ ರಿಕ್ಷಾದಲ್ಲಿ ತೆರಳುತ್ತಿದ್ದಾಗ ಅಟೋ ರಿಕ್ಷಾ ಮತ್ತು ಟ್ರಕ್‌ ಡಿಕ್ಕಿ ಸಂಭವಿಸಿ ಈ ಅಪಘಾತ ಸಂಭವಿಸಿತು ಎನ್ನಲಾಗಿದೆ. ರಿಕ್ಷಾದಲ್ಲಿ ಒಟ್ಟು ಹದಿನೆಂಟು ಮಂದಿ ಪ್ರಯಾಣಿಸುತ್ತಿದ್ದರು. ಗಾಯಗೊಂಡ ಮೂವರನ್ನು ನಿಝಾಮಾಬಾದ್‌ ಜಿಲ್ಲೆಯ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News