ಗಾಂಜಾ ಮಾರಾಟ: ಇಬ್ಬರ ಬಂಧನ
Update: 2016-05-16 18:40 GMT
ಬೆಂಗಳೂರು, ಮೇ 16: ಕಾನೂನುಬಾಹಿರವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಇಲ್ಲಿನ ಜೆ.ಜೆ.ನಗರದ ನಿವಾಸಿಗಳಾದ ಝಬಿ ಪಾಷ(35) ಹಾಗೂ ಜಬ್ಬಾರ್ ಖಾನ್(33) ಎಂದು ಗುರುತಿಸಲಾಗಿದೆ.
ಇಲ್ಲಿನ ಜೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮೈದಾನವೊಂದರ ಬಳಿ ಮಾದಕ ವಸ್ತು ಗಾಂಜಾವನ್ನು ಇಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಬಗ್ಗೆ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳು ಚಿಕ್ಕ ಚೀಲಗಳಲ್ಲಿ ಗಾಂಜಾವನ್ನು ಹಾಕಿ 100 ರಿಂದ 130 ರೂ.ನಂತೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.