ದಲಿತರಿಗೆ ಮೀಸಲಾತಿ ನೀಡದ ಶಾಲೆಗಳ ವಿರುದ್ಧ ಕ್ರಮ: ಎಸ್ಪಿ

Update: 2016-05-20 18:41 GMT

ಉಡುಪಿ, ಮೇ 20: ಉತ್ತಮ ಅಂಕ ಪಡೆದಿರುವ ದಲಿತ ವಿದ್ಯಾರ್ಥಿಗಳಿಗೆ ಮೀಸಲಾತಿಯನ್ನು ನೀಡದೆ ಹೆಚ್ಚಿನ ಶುಲ್ಕ ಪಡೆಯುವ ಶಾಲೆಗಳ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡು
ಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಣ್ಣಾಮಲೈ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶುಕ್ರವಾರ ನಡೆದ ದಲಿತರ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರ ದೂರಿಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು. ದಲಿತ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಪಡೆದಿದ್ದರೂ ಶಾಲೆಗಳಲ್ಲಿ ಅವರಿಗೆ ನೀಡಬೇಕಾದ ಮೀಸಲಾತಿಯನ್ನು ನೀಡದೆ ಹೆಚ್ಚಿನ ಶುಲ್ಕವನ್ನು ಪಡೆದುಕೊಂಡು ಪ್ರವೇಶ ನೀಡುತ್ತಿರುವುದು ದಲಿತರಿಗೆ ಮಾಡುತ್ತಿರುವ ಅನ್ಯಾಯ ಎಂದು ದಲಿತ ಮುಖಂಡರು ದೂರಿದರು.

ಸಭೆಯಲ್ಲಿ ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಸುಮನಾ, ಕುಂದಾಪುರ ಡಿವೈಎಸ್ಪಿ ಮಂಜುನಾಥ್ ಶೆಟ್ಟಿ, ಜಿಲ್ಲೆಯ ಎಲ್ಲ ಪೊಲೀಸ್ ಅಧಿಕಾರಿಗಳು, ದಲಿತ ಮುಖಂಡರು ಹಾಜರಿ ದ್ದರು. ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಕುಮಾರಸ್ವಾಮಿ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News