‘ವಿದ್ಯುತ್ ಕಂಬಗಳು ಧರಾಶಾಯಿಯಾಗಲು ಕಳಪೆ ಗುಣಮಟ್ಟದ ಕಾಮಗಾರಿ ಕಾರಣ’

Update: 2016-05-20 18:45 GMT

ಬಂಟ್ವಾಳ, ಮೇ 20: ತಾಲೂಕಿನಲ್ಲಿ ಮಂಗಳವಾರ ರಾತ್ರಿ ಬೀಸಿದ ಗಾಳಿಗೆ ನೂರಾರು ವಿದ್ಯುತ್ ಕಂಬಗಳು ಧರಾಶಾಯಿಯಾಗಿರುವುದು ಕಳಪೆ ಕಾಮಗಾರಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಆರೋಪಿಸಿದ್ದಾರೆ. ಗಾಳಿಯಿಂದ ಹಾನಿಗೊಳಗಾದ ತಾಲೂಕಿನ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಗಾಳಿಯಿಂದ ಕಂಬಗಳಿಗೆ ಉಂಟಾದ ಹಾನಿಗೆ ಸಂಬಂಧಿಸಿದಂತೆ ಮೆಸ್ಕಾಂ ಇಲಾಖೆಯ ಎಂ.ಡಿ.ಯೊಂದಿಗೆ ವಿವರ ಕೇಳಿದಾಗ, ತಾಲೂಕಿನ ವಿವಿಧ ಗ್ರಾಮಗಳಲ್ಲಿ 480 ಕಂಬಗಳು ಹಾನಿಗೊಳಗಾಗಿವೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈ ಬಾರೀ ಸಂಖ್ಯೆಯ ವಿದ್ಯುತ್ ಕಂಬಗಳು ಉರುಳಲು ಕಳಪೆ ಗುಣಮಟ್ಟದ ವಿದ್ಯುತ್ ಕಂಬಗಳ ಬಳಕೆ ಹಾಗೂ ಕಳಪೆ ಕಾಮಗಾರಿಯೇ ಕಾರಣವಾಗಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News