ಪ್ರಯಾಣಿಕರಿದ್ದ ಬಸ್ಸು ಕಮರಿಗೆ: ಏಳು ಸಾವು, 35 ಜನರಿಗೆ ಗಾಯ

Update: 2016-05-21 04:57 GMT

  ಶಿಮ್ಲಾ/ಚಾಂಬಾ, ಮೇ 21: ಚಾಂಬಾ ಜಿಲ್ಲೆಯಲ್ಲಿ 45 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಕಮರಿಗೆ ಬಿದ್ದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ 14 ಮಂದಿ ಮೃತಪಟ್ಟು, 31 ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್ ಸಾಂಗ್ನಿಯಿಂದ ದಲ್‌ಹೌಸಿ ಕಡೆಗೆ ಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಇತರ ನಾಲ್ವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು ಎಂದು ಸಲೋನಿಯ ಸಬ್ ಡಿವಿಜನಲ್ ಮ್ಯಾಜಿಸ್ಟ್ರೇಟ್(ಎಸ್‌ಡಿಎಂ) ಅಜಯ್ ಪ್ರಶಾರ್ ತಿಳಿಸಿದ್ದಾರೆ.

ರಕ್ಷಣಾ ಕಾರ್ಯ ಪೂರ್ಣಗೊಂಡಿದ್ದು, ಎಲ್ಲ ಪ್ರಯಾಣಿಕರನ್ನು ಅಪಘಾತದ ಸ್ಥಳದಿಂದ ತೆರವುಗೊಳಿಸಲಾಗಿದೆ. ಗಾಯಗೊಂಡ ಪ್ರಯಾಣಿಕರನ್ನು ಬಾಥ್ರಿ ಹಾಗೂ ಬಾನಿಖೆಟ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರಶಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News