ಭಿಕ್ಷಾಟನೆಗೆ ನಿಷೇಧ

Update: 2016-05-21 17:33 GMT

ಮಂಗಳೂರು, ಮೇ 20: ಕರ್ನಾಟಕ ಭಿಕ್ಷಾಟನೆ ನಿಷೇಧ ಕಾಯಿದೆ 1975ರಂತೆ ಯಾವುದೇ ವ್ಯಕ್ತಿಯು ಭಿಕ್ಷಾಟನೆ ಮಾಡುವುದನ್ನು ನಿಷೇಧಿಸಲಾಗಿದೆ. ಹಾಗೂ ಸೆಕ್ಷನ್ 11ರಂತೆ ಅವರ ದಸ್ತಗಿರಿ ಮಾಡಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಭಿಕ್ಷಾಟನೆ ಮಾಡುವುದು ಕಂಡು ಬರುತ್ತಿದ್ದು, ಇದಕ್ಕೆ ಯಾವುದೇ ರೀತಿಯ ಪ್ರೋತ್ಸಾಹ ನೀಡಬಾರದು.

ಭಿಕ್ಷಾಟನೆಯ ಹಿಂದೆ ವ್ಯವಸ್ಥಿತ ಜಾಲ ಕಾರ್ಯನಿರ್ವಸುತ್ತಿರುವುದು ಕಂಡು ಬಂದಿದೆ. ಆದುದರಿಂದ ಸಾರ್ವಜನಿಕರು, ಸಂಘ-ಸಂಸ್ಥೆಗಳು ಹಾಗೂ ಧಾರ್ಮಿಕ ಕೇಂದ್ರಗಳು ಭಿಕ್ಷಾಟನೆಗೆ ಪ್ರೋತ್ಸಾಹ ನೀಡಬಾರದು. ಭಿಕ್ಷಾಟನೆಯು ಕಂಡು ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಮಕ್ಕಳ ಸಹಾಯವಾಣಿ 1098ಗೆ ತಿಳಿಸುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News