ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ಸು ಡಿಕ್ಕಿ: ಯುವತಿ ಸಾವು

Update: 2016-05-22 06:12 GMT

ಬೆಂಗಳೂರು, ಮೇ 22: ನಗರದ ರಾಜರಾಜೇಶ್ವರಿ ನಗರದಲ್ಲಿ ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ಸೊಂದು ಡಿಕ್ಕಿಯಾದ ಪರಿಣಾಮ ಸವಿತಾ(17) ಎಂಬಾಕೆ ಮೃತಪಟ್ಟಿದ್ದಾರೆ. ಸವಿತಾರ ಅಣ್ಣನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗಾರ್ಮೆಂಟ್ಸ್‌ನಲ್ಲಿ ಉದ್ಯೋಗಿಯಾಗಿರುವ ಸವಿತಾ ದ್ವಿಚಕ್ರ ವಾಹನದಲ್ಲಿ ಅಣ್ಣನ ಜೊತೆ ಪಂತರಪಾಳ್ಯಕ್ಕೆ ಸಂಬಂಧಿಕರ ಮದುವೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News