ಭಿನ್ನಮತವಿಲ್ಲ, ರಾಜೀನಾಮೆ ಸುಳ್ಳು: ಮುಖ್ಯಮಂತ್ರಿ ಸಿದ್ದರಾಮಯ್ಯ
Update: 2016-06-19 15:33 GMT
ಬೆಂಗಳೂರು, ಜೂ. 19: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಮತ ಚಟುವಟಿಕೆ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಎಂಟು ಮಂದಿ ಶಾಸಕರು ಸಾಮೂಹಿಕ ರಾಜೀನಾಮೆ ನೀಡುತ್ತಾರೆಂಬುದು ಸುಳ್ಳು ಎಂದು ಅಲ್ಲಗಳೆದಿದ್ದಾರೆ.
ರವಿವಾರ ವಿಧಾನಸೌಧದಲ್ಲಿ ಸಚಿವ ಸಂಪುಟ ಅನೌಪಚಾರಿಕ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆ ಎಲ್ಲ ಶಾಸಕರನ್ನು ಕರೆದು ಸಮಾಲೋಚನೆ ನಡೆಸುತ್ತೇನೆ. ಮೊದಲ ಬಾರಿಗೆ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡಬಾರದು ಎಂದು ಯಾವುದೇ ನಿಯಮ ಇಲ್ಲ ಎಂದು ಸ್ಪಷ್ಟಪಡಿಸಿದರು.